ಕರ್ನಾಟಕ

karnataka

ಮಂಡ್ಯ: ಕುಡಿದ ಮತ್ತಿನಲ್ಲಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ

By

Published : Jul 30, 2021, 12:03 PM IST

ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಇಟ್ಟಿಗೆಯಿಂದ ಪ್ರಕಾಶ್​ ಎಂಬಾತನ ಮೇಲೆ ಬೀರೇಶ್​ ಎಂಬಾತ ಹಲ್ಲೆ ನಡೆಸಿದ್ದಾನೆ. ಪರಿಣಾಮ ಪ್ರಕಾಶ್​ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

mandya
ಮಂಡ್ಯ

ಮಂಡ್ಯ: ಕುಡಿತದ ಮತ್ತಿನಲ್ಲಿ ಜಗಳ ನಡೆದು ವ್ಯಕ್ತಿಯೊಬ್ಬ ಮತ್ತೊಬ್ಬನ ತಲೆಗೆ ಇಟ್ಟಿಗೆಯಿಂದ ಹೊಡೆದಿದ್ದಾನೆ. ತಕ್ಷಣವೇ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ನಡೆದಿದೆ.

ಪ್ರಕಾಶ್(52) ಎಂಬಾತ ಮೃತ ವ್ಯಕ್ತಿ. ಗುರುವಾರ ರಾತ್ರಿ 9 ಗಂಟೆಯ ಸಮಯದಲ್ಲಿ ಮೃತ ಪ್ರಕಾಶ್ ಹಾಗೂ ಮುತ್ಸಂದ್ರ ಗ್ರಾಮದ ಬೀರೇಶ್ ನಡುವೆ ಜಗಳ ನಡೆದಿದೆ. ಇಬ್ಬರ ನಡುವೆ ವಾಗ್ವಾದ ನಡೆದು ಪ್ರಕಾಶ್, ಬೀರೇಶ್ ಎಂಬುವನ ತಾಯಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಬೀರೇಶ್ ಇಟ್ಟಿಗೆಯಿಂದ ಹೊಡೆದಿದ್ದಾನೆ. ಪರಿಣಾಮ ಪ್ರಕಾಶ್ ತೀವ್ರವಾಗಿ ಗಾಯಗೊಂಡಿದ್ದಾನೆ.

ಈ ಬಳಿಕ ಪ್ರಕಾಶ್​ನನ್ನು ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಎಸ್‌ಪಿ ಅಶ್ವಿನಿ, ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಕುರಿತು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details