ಕರ್ನಾಟಕ

karnataka

ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ರೈತರ ಪ್ರತಿಭಟನೆ

By

Published : Nov 1, 2019, 10:27 AM IST

ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ,ಮಂಡ್ಯ ಹಾಲು ಉತ್ಪಾದಕರ ಸಹಕಾರ ಸಂಘ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಜನರು ರಸ್ತೆಗಳಿದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ರೈತರ ಪ್ರತಿಭಟನೆ

ಮಂಡ್ಯ:ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ,ಮಂಡ್ಯ ಹಾಲು ಉತ್ಪಾದಕರ ಸಹಕಾರ ಸಂಘ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಜನರು ರಸ್ತೆಗಳಿದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ರೈತರ ಪ್ರತಿಭಟನೆ

ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಸುಮಾರು 3 ಕಿಲೋ ಮೀಟರ್ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು,ಮೋದಿ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅವೈಜ್ಞಾನಿಕ ಹಾಲಿನ ಆಮದು ಒಪ್ಪಂದಿಂದ ರೈತರಿಗೆ ಸಾಕಷ್ಟು ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಈ ನಿರ್ಧಾರವನ್ನ ಕೈಬಿಡುವಂತೆ ಒತ್ತಾಯಿಸಿದರು. ರೈತರ ಹೋರಾಟಕ್ಕೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ವ್ಯಕ್ತಪಡಿಸಿದರು.

ಇನ್ನು, ಮುಕ್ತ ವ್ಯಾಪಾರ ಒಪ್ಪಂದವನ್ನ ಬಿಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಒಂದು ವೇಳೆ ಕೇಂದ್ರ ಸರ್ಕಾರ ಒಪ್ಪಂದ ಕೈಬಿಡದೇ ಇದ್ದಲ್ಲಿ ಬೃಹತ್​ ಹೋರಾಟ ನಡೆಸೋದಾಗಿ ಎಚ್ಚರಿಕೆ ನೀಡಿದರು.

ABOUT THE AUTHOR

...view details