ಕರ್ನಾಟಕ

karnataka

ಸಂಸದೆ ಸುಮಲತಾ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ದಿಶಾ ಸಭೆ

By

Published : Nov 8, 2019, 7:07 PM IST

ಮಂಡ್ಯ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ಸಂಸದೆ ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್​ನ ಕಾವೇರಿ ಸಭಾಂಗಣದಲ್ಲಿ ನಡೆಯಿತು.

ಸಂಸದೆ ಸುಮಲತಾ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ದಿಶಾ ಸಭೆ ನಡೆಯಿತು

ಮಂಡ್ಯ: ಎರಡು ವರ್ಷಗಳ ಬಳಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ ಸಂಸದೆ ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆಯಿತು.

ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಕಳೆದ ಸಾಲಿನ ಅಮೃತ್ ಯೋಜನೆ ಬಗ್ಗೆ ಮಾಹಿತಿ ಪಡೆದು, ಶೀಘ್ರವಾಗಿ ಕಾಮಗಾರಿಗಳನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ರು.

ಇದೇ ವೇಳೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಮಾತನಾಡಿ, ಎಲ್ಲೆಲ್ಲಿ ಕಾಮಗಾರಿ ಆರಂಭಕ್ಕೆ ವಿಘ್ನವಿದೆಯೋ ಅಲ್ಲೆಲ್ಲಾ 144 ಸೆಕ್ಷನ್ ಜಾರಿ ಮಾಡಿ ಕಾಮಗಾರಿ ನಡೆಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟರು.

ತಾವರಗೆರೆ, ಗುತ್ತಲು ಬಡಾವಣೆಯಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಸಭೆಯಲ್ಲಿ ಗಮನ ಸಳೆಯಲಾಯಿತು. ನಗರಾಭಿವೃದ್ಧಿಗೆ ಯಾವ ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಯಿತು.

ಸಂಸದೆ ಸುಮಲತಾ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ದಿಶಾ ಸಭೆ ನಡೆಯಿತು

ಜಿಲ್ಲಾ ಮಟ್ಟದ ಅಧಿಕಾರಿಗಳೂ ಸಭೆಯಲ್ಲಿ ಪಾಲ್ಗೊಂಡು ಇಲಾಖಾವಾರು ಮಾಹಿತಿ ನೀಡಿದರು. ಜೊತೆಗೆ ನಿಗಧಿತ ಅವಧಿಯಲ್ಲಿ ಕಾಮಗಾರಿಗಳನ್ನು ಮುಗಿಸುವ ಭರವಸೆ ನೀಡಿದರು.

ಸಭೆಗೆ ಬಂದ ಜಿ.ಪಂ ಅಧ್ಯಕ್ಷೆ:

ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ನಾಗರತ್ನ ಸ್ವಾಮಿ, ದಿಶಾ ಸಭೆಯಲ್ಲಿ ಪಾಲ್ಗೊಂಡು ಜೆಡಿಎಸ್ ಮುಖಂಡರಿಗೆ ಎಚ್ಚರಿಕೆ ರವಾನಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಜೊತೆ ವೇದಿಕೆ ಹಂಚಿಕೊಂಡು ಕೆಲವು ಮಾಹಿತಿಗಳ ವಿನಿಮಯ ಮಾಡಿಕೊಂಡರು. ನಾಗರತ್ನ ಅವರ ಪತಿ ಸ್ವಾಮಿ ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದರಿಂದ, ನಾಗರತ್ನ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಜೆಡಿಎಸ್ ಸದಸ್ಯರು ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.

Intro:ಮಂಡ್ಯ: ಸರಿ ಸುಮಾರು ಎರಡು ವರ್ಷಗಳ ನಂತರ ದಿಶಾ ಸಭೆ ಸಂಸದೆ ಸುಮಲತಾ ಅಂಬರೀಶ್ ನೇತೃತ್ವದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆದು, ಕೇಂದ್ರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ಅಧಿಕಾರಿಗಳು ನೀಡಿದರು.
ಸಭೆಗೆ ಹಾಜರಾದ ಸಂಸದೆ ಸುಮಲತಾ ಅಂಬರೀಶ್, ಕಳೆದ ಸಾಲಿನ ಅಮೃತ್ ಯೋಜನೆ ಬಗ್ಗೆ ಮಾಹಿತಿ ಪಡೆದು, ಶೀಘ್ರವಾಗಿ ಕಾಮಗಾರಿಗಳನ್ನು ಮುಗಿಸಬೇಕು ಎಂದು ಎಚ್ಚರಿಕೆ ನೀಡಿದ್ರು. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಲ್ಲೆಲ್ಲಿ ಕಾಮಗಾರಿ ಆರಂಭಕ್ಕೆ ವಿಘ್ನವಿದೆಯೋ ಅಲ್ಲೆಲ್ಲಾ 144 ಸೆಕ್ಷನ್ ಜಾರಿ ಮಾಡಿ ಕಾಮಗಾರಿ ನಡೆಸಲು ಸೂಚನೆ ನೀಡಿದರು.
ತಾವರಗೆರೆ, ಗುತ್ತಲು ಬಡಾವಣೆಯಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಗಮನ ಸಳೆಯಲಾಯಿತು. ಇನ್ನು ನಗರದ ಅಭಿವೃದ್ಧಿಗೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡು, ತಮ್ಮ ಇಲಾಖಾವಾರು ಮಾಹಿತಿ ನೀಡಿದರು. ಜೊತೆಗೆ ನಿಗಧಿತ ಅವಧಿಯಲ್ಲಿ ಕಾಮಗಾರಿಗಳನ್ನು ಮುಗಿಸುವ ಭರವಸೆಯನ್ನು ನೀಡಿದರು.
ಸಭೆಗೆ ಬಂದ ಜಿ.ಪಂ ಅಧ್ಯಕ್ಷೆ: ಇನ್ನು ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿರುವ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಸ್ವಾಮಿ, ದಿಶಾ ಸಭೆಯಲ್ಲಿ ಪಾಲ್ಗೊಂಡು ಜೆಡಿಎಸ್ ಮುಖಂಡರಿಗೆ ಎಚ್ಚರಿಕೆ ರವಾನಿಸಿದ್ದಾರೆ.
ಸಂಸದೆ ಸುಮಲತಾ ಅಂಬರೀಶ್ ಜೊತೆ ವೇದಿಕೆ ಹಂಚಿಕೊಂಡು ಕೆಲವು ಮಾಹಿತಿಗಳ ವಿನಿಮಯ ಮಾಡಿಕೊಂಡರು. ನಾಗರತ್ನ ಅವರ ಪತಿ ಸ್ವಾಮಿ ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದರಿಂದ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಲು ಇನ್ನಿಲ್ಲದ ಕಸರತ್ತನ್ನು ಜೆಡಿಎಸ್ ಸದಸ್ಯರು ಮಾಡುತ್ತಿದ್ದಾರೆ.
ಈಗಾಗಲೇ ಎರಡು ಸಭೆಗಳಿಗೆ ಗೈರು ಹಾಕಿರುವ ಜೆಡಿಎಸ್ ಸದಸ್ಯರು, ಶತಾಯಗತಾಯ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಲು ಹೋರಾಟ ಮಾಡುತ್ತಿದ್ದಾರೆ. ಆದರೆ ಇಂದು ದಿಶಾ ಸಭೆಗೆ ಹಾಜರಾಗಿ ಅಧ್ಯಕ್ಷರು ಜೆಡಿಎಸ್ ಸದಸ್ಯರಿಗೆ ಟಾಂಗ್ ನೀಡಿದ್ದಾರೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯConclusion:

ABOUT THE AUTHOR

...view details