ಮಂಡ್ಯ:ಶಿಂಷಾ ನದಿಯಲ್ಲಿ ಇಬ್ಬರ ಶವ ಸಿಕ್ಕಿದ್ದು, ಪುರುಷ- ಮಹಿಳೆ ಇಬ್ಬರೂ ಜೊತೆಯಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇಂದು ಮುಂಜಾನೆ ಮದ್ದೂರು ಸಮೀಪದ ಶಿಂಷಾ ನದಿಯಲ್ಲಿ ಪುರುಷ ಮತ್ತು ಮಹಿಳೆಯ ಶವ ಪತ್ತೆಯಾಗಿದೆ. ಇಬ್ಬರ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಇಬ್ಬರೂ ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಜೊತೆಯಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.
ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಶಿಂಷಾ ನದಿ ಸೇತುವೆ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Last Updated : Oct 29, 2019, 12:09 PM IST