ಕರ್ನಾಟಕ

karnataka

ಮುಂದಿನ ವರ್ಷದೊಳಗೆ 117 ಪೊಲೀಸ್ ಠಾಣೆ ನಿರ್ಮಾಣ: ಆರಗ ಜ್ಞಾನೇಂದ್ರ

By

Published : Oct 1, 2022, 9:23 AM IST

ಮುಂದಿನ ವರ್ಷದೊಳಗೆ 117 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುವುದು. ಮತ್ತು 2025ರ ವೇಳೆಗೆ ಸುಮಾರು 11 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಮೂಲಕ ಪೊಲೀಸರು ನೆಮ್ಮದಿಯಿಂದ ಬದುಕಲು ಸರ್ಕಾರ ಅನುಕೂಲ ಮಾಡಿ ಕೊಡುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಆರಗ ಜ್ಞಾನೇಂದ್ರ
araga jnanendra

ಮೈಸೂರು: ಮುಂದಿನ ವರ್ಷದೊಳಗೆ 202 ಕೋಟಿ ರೂ.ವೆಚ್ಚದಲ್ಲಿ ರಾಜ್ಯದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಜ್ಯೋತಿ ನಗರದಲ್ಲಿರುವ ಡಿಆರ್​ಎ ಆವರಣಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಡಿಎಆರ್ ಘಟಕದ ಆಡಳಿತ ಕಚೇರಿ ಹಾಗೂ ಶಸ್ತ್ರಗಾರ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರಿಗೆ 2025ರ ವೇಳೆಗೆ ಸುಮಾರು 11 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಮೂಲಕ ನೆಮ್ಮದಿಯಿಂದ ಬದುಕಲು ಸರ್ಕಾರ ಅನುಕೂಲ ಮಾಡಿಕೊಡುತ್ತದೆ. ಜೊತೆಗೆ ಕರ್ತವ್ಯಕ್ಕೆ ಕಚೇರಿಗಳನ್ನು ನಿರ್ಮಿಸಲಾಗುವುದು ಎಂದರು.

ಮೈಸೂರು ಜಿಲ್ಲಾ ಸಶಸ್ತ್ರ ಪಡೆಯ ಆಡಳಿತ ಕಚೇರಿ ಉದ್ಘಾಟನೆ

ಪೊಲೀಸರ ಕೈಗೆ ಶಸ್ತ್ರಾಸ್ತ್ರಗಳನ್ನು ನೀಡಿ ಬೆರಳಚ್ಚು ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉತ್ತಮ ವಾತಾವರಣ ನಿರ್ಮಿಸಲಾಗುವುದು. ಈ ಮೂಲಕ ಅಪರಾಧಿಗಳನ್ನು ತಕ್ಷಣ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಜೊತೆಗೆ ನ್ಯಾಯಾಲಯಕ್ಕೆ ಹೋಗುವ ಪ್ರಕರಣಗಳ ಸಂಖ್ಯೆಯನ್ನ ಸಹ ಕಡಿಮೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ರಾಜ್ಯದಲ್ಲಿ 110 ಮಂದಿ ಪಿಎಫ್ಐ ಮುಖಂಡರ ಬಂಧನ: ಗೃಹ ಸಚಿವ ಆರಗ ಜ್ಞಾನೇಂದ್ರ

ಈವರೆಗೂ 42 ಪಿಎಫ್ಐ ಕಚೇರಿಗಳನ್ನು ವಶಕ್ಕೆ ಪಡೆದು ಅಲ್ಲಿ ದೊರೆತ ಉಪಕರಣಗಳನ್ನು ತನಿಖೆಗೊಳಪಡಿಸುವ ಕೆಲಸ ನಡೆಯುತ್ತಿದೆ. ದಸರಾ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಶಸ್ತ್ರಾಸ್ತ್ರ ಕಟ್ಟಡ ಉದ್ಘಾಟನೆ: 1 ಕೋಟಿ‌ 95 ಲಕ್ಷ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ನಿರ್ಮಿಸಿರುವ ಮೈಸೂರು ಜಿಲ್ಲಾ ಸಶಸ್ತ್ರ ಪಡೆಯ ಆಡಳಿತ ಕಚೇರಿ ಮತ್ತು ಆರ್ಮರಿ ಕಟ್ಟಡದಲ್ಲಿ ಡಿಎಸ್​ಪಿ ಕೊಠಡಿ, ಆರ್​ಎಸ್​ಐಒ ಕೊಠಡಿ, ಕಂಪ್ಯೂಟರ್ ಮತ್ತು ವೈರ್ ಲೆಸ್ ಸೆಕ್ಷನ್, ಸ್ಟೋರ್ ರೂಂ, ಡ್ಯೂಟಿ ಆಫೀಸರ್ ರೂಂ ಒಳಗೊಂಡಿದೆ ಎಂದರು. ಈ ವೇಳೆ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ತನ್ವೀರ್ ಸೇಠ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಶೀಘ್ರದಲ್ಲೇ 900 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ : ಗೃಹ ಸಚಿವ ಆರಗ ಜ್ಞಾನೇಂದ್ರ

ABOUT THE AUTHOR

...view details