ಕರ್ನಾಟಕ

karnataka

ಮೈಸೂರು ರೇಪ್​ ಪ್ರಕರಣ: ಉನ್ನತ ಅಧಿಕಾರಿಗಳ ಸಭೆ ನಡೆಸಿದ ಆರಗ ಜ್ಞಾನೇಂದ್ರ

By

Published : Aug 27, 2021, 3:40 PM IST

Updated : Aug 27, 2021, 4:29 PM IST

ಇಂದು ಐಜಿ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮೈಸೂರು ರೇಪ್​ ಪ್ರಕರಣದ ಸಂಬಂಧ ಎಡಿಜಿಪಿ ಪ್ರತಾಪ್ ರೆಡ್ಡಿ, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಸಿಟಿ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಹಾಗೂ ಎಸ್ಪಿ ಚೇತನ್ ಅವರನ್ನೊಳಗೊಂಡಂತೆ ಉನ್ನತ ಅಧಿಕಾರಿಗಳ ಸಭೆ ನಡೆಸಿದರು.

ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ
Home Minister Araga Jnanendra made meeting with officers at Mysore

ಮೈಸೂರು:ನಗರದ ಐಜಿ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.

ಉನ್ನತ ಅಧಿಕಾರಿಗಳ ಸಭೆ ನಡೆಸಿದ ಆರಗ ಜ್ಞಾನೇಂದ್ರ

ಇಂದು ನಗರದ ಐಜಿ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಎಡಿಜಿಪಿ ಪ್ರತಾಪ್ ರೆಡ್ಡಿ, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಸಿಟಿ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಹಾಗೂ ಎಸ್ಪಿ ಚೇತನ್ ಅವರನ್ನೊಳಗೊಂಡಂತೆ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಚಿನ್ನದಂಗಡಿ ದರೋಡೆ ಪ್ರಕರಣ ಸೇರಿದಂತೆ ಇತರ ಅಪರಾಧ ಪ್ರಕರಣಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.

ಚಾಮುಂಡಿ ಬೆಟ್ಟಕ್ಕೆ ನಾಮಕೇವಾಸ್ತೆ ಬಂದು ಹೋದ ಗೃಹ ಸಚಿವರು:

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ

ಇಂದು ಗೃಹ ಸಚಿವ ಸಚಿವ ಆರಗ ಜ್ಞಾನೇಂದ್ರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ನಿರ್ಜನ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ, ಯಾವುದೇ ಪರಿಶೀಲನೆ ನಡೆಸದೇ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರಿಂದ ಮಾಹಿತಿ ಪಡೆದು ತೆರಳಿದರು. ಕೇವಲ 5 ನಿಮಿಷದಲ್ಲಿ ಘಟನಾ ಸ್ಥಳ ನೋಡಿ ತೆರಳಿದರು ಎನ್ನಲಾಗುತ್ತಿದೆ.

ಓದಿ: ಮೈಸೂರು ಬಳಿಕ ಬೆಳಗಾವಿಯಲ್ಲೂ ಹೇಯ ಕೃತ್ಯ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್..!

Last Updated :Aug 27, 2021, 4:29 PM IST

ABOUT THE AUTHOR

...view details