ಮೈಸೂರು :ನಗರವನ್ನೇ ಬೆಚ್ಚಿ ಬೀಳಿಸಿದ್ದ ಚಿನ್ನದ ಅಂಗಡಿ ದರೋಡೆ, ಕೊಲೆ ಹಾಗೂ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿಯನ್ನು ಇಲ್ಲಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ :
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಮಂದಿ ಆರೋಪಿಗಳ ವಿರುದ್ಧ 1,499 ಪುಟಗಳಷ್ಟು ದೋಷಾರೋಪ ಪಟ್ಟಿಯನ್ನು ಇಲ್ಲಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ.
ಬಂಧಿಸಲಾಗಿದ್ದ 7 ಮಂದಿಯ ಪೈಕಿ ಒಬ್ಬ ಆರೋಪಿಯ ಪಾತ್ರ ಘಟನೆಯಲ್ಲಿ ಇಲ್ಲ ಎಂಬುದು ಗೊತ್ತಾದ ನಂತರ ಆತನನ್ನು ಬಿಟ್ಟು ಉಳಿದ 6 ಮಂದಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.