ಕರ್ನಾಟಕ

karnataka

ಕೇಂದ್ರ ಸರ್ಕಾರ ಹಿಟ್ಲರ್ ಧೋರಣೆ ಅನುಸರಿಸುತ್ತಿದೆ.. ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ವಾಗ್ದಾಳಿ

By

Published : Sep 8, 2019, 1:36 PM IST

ಕೇಂದ್ರ ಸರ್ಕಾರ ರಾಜಕೀಯ ದ್ವೇಷಕ್ಕಾಗಿ ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಧಮನಕಾರಿ, ಸರ್ವಾಧಿಕಾರಿ ಧೋರಣೆ ಅನುಸರಿಸುತ್ತ, ಹಿಟ್ಲರ್ ರೀತಿಯೇ ಆಡಳಿತ ನಡೆಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು.

ಈಶ್ವರ್ ಖಂಡ್ರೆ

ಮೈಸೂರು: ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ನಡೆಯುತ್ತಿರುವ ಸಾಂಕೇತಿಕ ಧರಣಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭಾಗವಹಿಸಿ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ಹಿಟ್ಲರ್ ಧೋರಣೆ ಅನುಸರಿಸುತ್ತಿದೆ.. ಖಂಡ್ರೆ ವಾಗ್ದಾಳಿ

ನಗರದ ಅಗ್ರಹಾರ ವೃತ್ತದ ಬಳಿ ನಿನ್ನೆಯಿಂದ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭೇಟಿ ನೀಡಿದರು. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ರಾಜಕೀಯ ದ್ವೇಷಕ್ಕಾಗಿ ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಧಮನಕಾರಿ, ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಹಿಟ್ಲರ್ ರೀತಿಯೇ ಆಡಳಿತ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.ತನಿಖಾಸಂಸ್ಥೆಗೆ 4 ದಿನ ಸಹಕಾರ ನೀಡಿದ ಡಿಕೆಶಿ ಬಂಧನ ತೀವ್ರ ಖಂಡನೀಯ ಎಂದು ಕಿಡಿಕಾರಿದರು.

Intro:ಮೈಸೂರು: ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ನಡೆಯುತ್ತಿರುವ ಸಾಂಕೇತಿಕ ಧರಣಿಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಭಾಗವಹಿಸಿ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ವಾಗ್ದಾಳಿ ನಡೆಸಿದರು.Body:



ನಗರದ ಆಗ್ರಹಾರ ವೃತ್ತದ ಬಳಿ ನೆನ್ನೆಯಿಂದ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭೇಟಿ ನೀಡಿ
ಕೇಂದ್ರ ಸರ್ಕಾರ ತನಿಖೆ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ರಾಜಕೀಯ ದ್ವೇಷಕ್ಕಾಗಿ ವಿರೋಧ ಪಕ್ಷಗಳ ಧ್ವನಿ ಅಡಗಿಸುವ ದಮನಕಾರಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು ಹಿಟ್ಲರ್ ರೀತಿ ಆಡಳಿತ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ ಈಶ್ವರ್ ಖಂಡ್ರೆ ತನಿಖೆ ಸಂಸ್ಥೆಗೆ ೪ ದಿನಗಳು ಸಹಕಾರ ನೀಡಿದ ಡಿ.ಕೆಶಿಯನ್ನು ಬಂಧಿಸಿರುವುದು ಖಂಡನೀಯ ಎಂದರು.Conclusion:

ABOUT THE AUTHOR

...view details