ಕರ್ನಾಟಕ

karnataka

ಪಿಎಸ್​ಐ ಹಗರಣದ ಬಗ್ಗೆ ಸಮಗ್ರ ತನಿಖೆ ಮಾಡಲಿ: ಶಾಸಕ ಬಿ.ವೈ.ವಿಜಯೇಂದ್ರ

By

Published : Jun 5, 2023, 10:51 PM IST

ಪಿಎಸ್ಐ ಹಗರಣದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಶಾಸಕ ಬಿ.ವೈ ವಿಜಯೇಂದ್ರ
ಶಾಸಕ ಬಿ.ವೈ ವಿಜಯೇಂದ್ರ

ಮೈಸೂರು : ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವಾಗ ಕೆಲವರು ಪಿಎಸ್​ಐ ಹಗರಣದಲ್ಲಿ ನನ್ನ ಹೆಸರನ್ನೂ ಸಹ ತೇಲಿಬಿಟ್ಟಿದ್ದರು. ಈಗ ಬಹುಮತ ಪಡೆದು ಕಾಂಗ್ರೆಸ್ ಸರ್ಕಾರ ರಾಜ್ಯದ ಚುಕ್ಕಾಣಿ ಹಿಡಿದಿದೆ. ಪಿಎಸ್​ಐ ಹಗರಣವನ್ನು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗು ಶಾಸಕ ಬಿ.ವೈ.ವಿಜಯೇಂದ್ರ ಮೈಸೂರಿನಲ್ಲಿ ಹೇಳಿಕೆ ನೀಡಿದರು.

ಇಂದು ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈಸೂರಿಗೆ ಬಿ.ವೈ.ವಿಜಯೇಂದ್ರ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ತೋರಿಸಿ ಮತ ಪಡೆದಿದ್ದಾರೆ. ಜನರು ಕಾಂಗ್ರೆಸ್ ಸರ್ಕಾರದ ಮೇಲೆ ಬಹಳ ನಿರೀಕ್ಷೆ ಇಟ್ಟಿದ್ದಾರೆ.

ಇದನ್ನೂ ಓದಿ :ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಕಾಂಗ್ರೆಸ್ ಸರ್ಕಾರ ಟೋಪಿ ಹಾಕುತ್ತಿದೆ: ಸಂಸದ ಪ್ರತಾಪ್ ಸಿಂಹ

ಮುಖ್ಯಮಂತ್ರಿಗಳು ಗ್ಯಾರಂಟಿಗಳನ್ನು ಘೋಷಣೆ ಸಹ ಮಾಡಿದ್ದು, ಅವರ ಗ್ಯಾರಂಟಿ ಯೋಜನೆಗಳಿಗಾಗಿ ಜನರ ಮೇಲೆ ಇನ್ನೂ ಹೆಚ್ಚಿನ ತೆರಿಗೆ ಹಾಕುತ್ತಾರಾ ಅಥವಾ ಸಾಲದ ಹೊರೆಯನ್ನು ಹೆಚ್ಚು ಮಾಡುತ್ತಾರಾ? ಈಗಾಗಲೇ ಪ್ರತಿ ಯೂನಿಟ್‌ಗೆ 75 ಪೈಸೆ ಹೆಚ್ಚಳ ಮಾಡಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಸ್ಕೃತಿ ಬಗ್ಗೆ ತಿಳಿದಿದ್ದರೆ ಸಚಿವರು ಈ ಹೇಳಿಕೆ ನೀಡ್ತಿರಲಿಲ್ಲ:ಮೈಸೂರಿನಲ್ಲಿ ಪಶುಸಂಗೋಪನೆ ಹಾಗೂ ರೇಷ್ಮೆ ಖಾತೆಯ ಸಚಿವ ಕೆ. ವೆಂಕಟೇಶ್​ ಅವರು ಗೋಹತ್ಯೆ ಕಾಯಿದೆ ರದ್ದುಗೊಳಿಸುವ ವಿಷಯವನ್ನು ಪ್ರಸ್ತಾಪ ಮಾಡಿದ್ದರು. ಎಮ್ಮೆ, ಕೋಣಗಳನ್ನು ಕಡಿದು ಹಾಕುವುದಾದರೆ ಹಸುಗಳನ್ನು ಏಕೆ ಕಡಿಯಬಾರದು? ಎಂದು ಹೇಳಿದ್ದರು. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ :ಕರ್ನಾಟಕದಲ್ಲಿ ಶೀಘ್ರವೇ ವಾಕ್ ಸ್ವಾತಂತ್ರ್ಯ ಮೊಟಕು ಆಗಲಿದೆ: ಮಾಜಿ ಸಿಎಂ ಬೊಮ್ಮಾಯಿ ಗರಂ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿ.ವೈ.ವಿಜಯೇಂದ್ರ, ಸಚಿವರ ಈ ಹೇಳಿಕೆ ನೋಡಿದರೆ ಅವರಿಗೆ ದೇಶದ ಸಂಸ್ಕೃತಿ ಬಗ್ಗೆ ಅರಿವು, ಕಾಳಜಿ ಇಲ್ಲ ಎಂದೆನಿಸುತ್ತದೆ. ಈ ರೀತಿಯ ಉಡಾಫೆ ಹೇಳಿಕೆಯನ್ನು ರಾಜ್ಯದ ಜನರು ನಿರೀಕ್ಷೆ ಮಾಡಿರಲಿಲ್ಲ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ರೀತಿ ನಡೆದುಕೊಳ್ಳುತ್ತಿದ್ದಾರೆ. ನಮ್ಮ ಹಿಂದು ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಸಚಿವರಿಗೆ ತಿಳಿದಿದ್ದರೆ ಈ ರೀತಿಯ ಹೇಳಿಕೆ ನೀಡುತ್ತಿರಲಿಲ್ಲ. ನಾಳೆಯಿಂದ ಬಿಜೆಪಿ ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸುತ್ತದೆ ಎಂದರು.

ಇದನ್ನೂ ಓದಿ :ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು?: ಸಚಿವ ಕೆ ವೆಂಕಟೇಶ್ ಪ್ರಶ್ನೆ

ABOUT THE AUTHOR

...view details