ಕರ್ನಾಟಕ

karnataka

ಪ್ರಧಾನಿ ಮೈಸೂರು ಪ್ರವಾಸಕ್ಕೆ ₹25 ಕೋಟಿ ವೆಚ್ಚ: ಸಚಿವ ಎಸ್‌.ಟಿ.ಸೋಮಶೇಖರ್

By

Published : Jun 22, 2022, 4:23 PM IST

ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಜಿಲ್ಲಾ ಪ್ರವಾಸ ಅತ್ಯಂತ ಯಶಸ್ವಿಯಾಗಿದೆ. ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿಗಳು ಹಾಗೂ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸಚಿವ ಎಸ್. ಟಿ ಸೋಮಶೇಖರ್
ಸಚಿವ ಎಸ್. ಟಿ ಸೋಮಶೇಖರ್

ಮೈಸೂರು:ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಕಾಲದ ಮೈಸೂರು ಪ್ರವಾಸಕ್ಕೆ ಒಟ್ಟು 25 ಕೋಟಿ ರೂ ವೆಚ್ಚವಾಗಿದೆ. ರಸ್ತೆ ರಿಪೇರಿ, ಡಾಂಬರೀಕರಣ, ಯೋಗ ದಿನದ ಖರ್ಚು ಇದರಲ್ಲಿ ಒಳಗೊಂಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾಹಿತಿ ನೀಡಿದರು. ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.


ಈ ಬಾರಿ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಕೋವಿಡ್​ನ 2ನೇ ಡೋಸ್ ಲಸಿಕೆ ಪಡೆದವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಲ್ಲ. ಆದರೆ, 2ನೇ ಡೋಸ್​ ಪಡೆಯದೇ ಇರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ನೀಡಬೇಕು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ಕರೆದ ಸಿಎಂ

TAGGED:

ABOUT THE AUTHOR

...view details