ಕರ್ನಾಟಕ

karnataka

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹ ರಾಜಕೀಯ ಭವಿಷ್ಯ ಮುಕ್ತಾಯ: ಎಂ.ಲಕ್ಷ್ಮಣ್

By

Published : Jun 16, 2023, 4:12 PM IST

ನಿಮ್ಮನ್ನು ಸೋಲಿಸುವ ಕೆಲಸವನ್ನು ಬಿಜೆಪಿಯವರೇ ಮಾಡುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್
ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್

ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್

ಮೈಸೂರು :2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಪೊಲಿಟಿಕಲ್ ಲೈಫ್ ಎಂಡ್ ಆಗುತ್ತದೆ. ನಿಮ್ಮನ್ನು ಸೋಲಿಸುವ ಕೆಲಸವನ್ನು ಬಿಜೆಪಿಯವರೇ ಮಾಡುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್ ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ಟೀಕಾಸಮರ ನಡೆಸಿದರು. ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ನಿಮ್ಮ ಜೊತೆ ಯಾವೊಬ್ಬ ಬಿಜೆಪಿ ನಾಯಕರೂ ಬರುವುದಿಲ್ಲ. ನೀವೊಬ್ಬರೇ ಪತ್ರಿಕಾಗೋಷ್ಠಿ ನಡೆಸುತ್ತೀರಿ. ನಿಮ್ಮನ್ನು ಸೋಲಿಸಲು ಎಲ್ಲೆಡೆ ಕಾಯುತ್ತಿದ್ದಾರೆ ಎಂದರು.

ಪ್ರತಾಪ್ ಸಿಂಹಗೆ ಸವಾಲು: ಸೋತ ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದೀರಿ. ಪ್ರತಾಪ್ ಸಿಂಹ ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ. ಹಾಗಾದರೆ ನಿಮ್ಮ ಪಕ್ಷದಲ್ಲಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಹೇಳಿ?. 2014ರಲ್ಲಿನ ಲೋಕಸಭಾ ಚುನಾವಣೆಯಲ್ಲಿ ನೀವು ಹೇಗೆ ಗೆದ್ದಿರಿ. ನಿಮ್ಮ ಗೆಲುವಿಗೆ ಯಾರು ಸಪೋರ್ಟ್ ಮಾಡಿದ್ದರು. ನೀವು ಯಾವ ಪಕ್ಷದ ಕಾಲು ಹಿಡಿದಿರಿ ಹಾಗೂ 2019ರಲ್ಲಿ ಹೇಗೆ ಗೆದ್ದಿರಿ. ಯಾವ ರೀತಿ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿರಿ ಎಂಬುದನ್ನು ತಿಳಿಸಿ ಎಂದು ಲಕ್ಷ್ಮಣ್ ಪ್ರಶ್ನಿಸಿದರು.

ನೀವು ಸಂಸದರಾಗಿ ಈ ಬಾರಿ ಯಾವ ಯಾವ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೀರಿ. ವರುಣಾದಲ್ಲಿ ಏಕೆ ಪ್ರಚಾರ ಮಾಡಿದ್ದೀರಿ. ನೀವು ಹೊಂದಾಣಿಕೆ ರಾಜಕಾರಣ ಮಾಡಿಲ್ಲವೇ ಎಂದು ವಾಗ್ದಾಳಿ ನಡೆಸಿದ ಲಕ್ಷ್ಮಣ್, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಿಮ್ಮ ಕಾರ್ಯ ಏನು, ಮೈಸೂರು ವಿವಿಯಲ್ಲಿ ನೀವು ಬ್ಲಾಕ್ ಮೇಲ್ ಮಾಡಲು ಎಲ್ಲಿಗೆ ಹೋಗಿದ್ದಿರಿ ಎಂಬುದನ್ನು ಬಹಿರಂಗಪಡಿಸಿ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯಲ್ಲಿ ಘೋಷಣೆ ಮಾಡಿದ 10 ಕೆಜಿ ಅಕ್ಕಿ ಕೊಡದಿದ್ದರೆ, ಬಿಜೆಪಿಯವರು ಪ್ರತಿಭಟನೆ ಮಾಡುತ್ತೇವೆ ಎಂಬ ಹೇಳಿಕೆ ಸರಿಯಲ್ಲ ಎಂದರು.

ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್

ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುತ್ತೇವೆ: ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಬೇರೆಬೇರೆ ರಾಜ್ಯಗಳಿಂದ ಅಕ್ಕಿಯನ್ನು ಖರೀದಿ ಮಾಡುತ್ತೇವೆ. ಇದಕ್ಕೆ ಸಂಬಂಧಿಸಿದ ಚರ್ಚೆ ಆಗಿದೆ. ಕಳೆದ ಒಂದು ವಾರದಿಂದ ವಿದ್ಯುತ್ ದರ ಹೆಚ್ಚಾಗಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ವಿದ್ಯುತ್ ದರ ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಹೆಚ್ಚಾಗಿತ್ತು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹೆಚ್ಚಾದ ವಿದ್ಯುತ್ ದರದ ಬಗ್ಗೆ ಮಾತನಾಡುತ್ತಿಲ್ಲ. ಸುಮ್ಮಸುಮ್ಮನೆ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ‌ ಎಂದು ಎಂ.ಲಕ್ಷ್ಮಣ್ ಹೇಳಿದರು.

ಇದನ್ನೂ ಓದಿ:'ಅನ್ನಭಾಗ್ಯ ಯೋಜನೆ'ಯಡಿ ಅಕ್ಕಿ ನೀಡಲು ನಿರಾಕರಣೆ.. ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ: DCM

ABOUT THE AUTHOR

...view details