ಕರ್ನಾಟಕ

karnataka

ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ: ಸಿದ್ದರಾಮಯ್ಯ

By

Published : Dec 8, 2022, 1:14 PM IST

siddaramaiah-said-gujarat-result-will-not-affect-karnataka

ಕರ್ನಾಟಕದಲ್ಲಿ ಭ್ರಷ್ಟ ಸರ್ಕಾರವಿದೆ. ಹೀಗಾಗಿ ನಾವು ಸುಮ್ಮನೆ ಇದ್ದರು ಗೆಲ್ಲುತ್ತೇವೆ ಎಂದು ಈ ವೇಳೆ ಹೇಳಿದರು.

ಮೈಸೂರು: ಗುಜರಾತ್​ನಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಆದರೆ ಈ ಫಲಿತಾಂಶ ಕರ್ನಾಟಕದ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಂದು ವರುಣಾ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಗುಜರಾತ್ ನಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದಕೊಂಡಿದ್ದು ಅಧಿಕಾರ ಹಿಡಿಯುವ ಹಾದಿಯಲ್ಲಿದೆ. ಕಾಂಗ್ರೆಸ್​ಗೆ ಗುಜರಾತ್​ನಲ್ಲಿ ಅಮ್ ಆದ್ಮಿ ಪಾರ್ಟಿ ಪೈಪೋಟಿ ನೀಡಿದ್ದು, ಇದು ಕಾಂಗ್ರೆಸ್​ನ ಮತಗಳನ್ನು ವಿಭಾಗ ಮಾಡಿದೆ. ಹೀಗಾಗಿ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ ಎಂದರು.

ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ: ಸಿದ್ದರಾಮಯ್ಯ

ಒಂದು ರಾಜ್ಯದ ಚುನಾವಣಾ ಫಲಿತಾಂಶ ಮತ್ತೊಂದು ರಾಜ್ಯದ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ. ಅದರಂತೆ ಗುಜರಾತ್​ನ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ. ಒಂದು ವೇಳೆ ಹಾಗಿರುತ್ತಿದ್ದರೆ ಬಿಜೆಪಿಯು ದೆಹಲಿ ಕಾರ್ಪೊರೇಷನ್ ಚುನಾವಣೆಯಲ್ಲಿ ಯಾಕೆ ಗೆಲ್ಲಲಿಲ್ಲ? ಎಂದು ಪ್ರಶ್ನಸಿದರು. ಕರ್ನಾಟಕದಲ್ಲಿ ಭ್ರಷ್ಟ ಸರ್ಕಾರವಿದೆ. ಹೀಗಾಗಿ ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಇದನ್ನೂ ಓದಿ:ಹಿಮಾಚಲದಲ್ಲಿ ಕಾಂಗ್ರೆಸ್​ ಮೇಲುಗೈ.. ಬಿಜೆಪಿಗೆ ಮುಳುವಾದ ಬಂಡಾಯ

ABOUT THE AUTHOR

...view details