ಕರ್ನಾಟಕ

karnataka

ಹಿಂದೂ ಕಾರ್ಯಕರ್ತರು ಒಬ್ಬೊಬ್ಬರೇ ಓಡಾಡಬೇಡಿ: ಶ್ರೀರಾಮುಲು

By

Published : Jul 12, 2023, 3:05 PM IST

Updated : Jul 12, 2023, 8:51 PM IST

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾನೂನನ್ನು ಮೂಟೆ ಕಟ್ಟಿ ಬಿಸಾಕಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

sriramulu
ಮೃತ ವೇಣುಗೋಪಾಲ್ ಪತ್ನಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶ್ರೀರಾಮುಲು

ಮೃತ ವೇಣುಗೋಪಾಲ್ ಪತ್ನಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶ್ರೀರಾಮುಲು

ಮೈಸೂರು: ಹಿಂದೂ ಕಾರ್ಯಕರ್ತರು ಒಬ್ಬೊಬ್ಬರೇ ಓಡಾಡಬೇಡಿ ಎಂದು ಮಾಜಿ ಸಚಿವ ಶ್ರೀರಾಮುಲು ಕಾರ್ಯಕರ್ತರಿಗೆ ಮನವಿ ಮಾಡಿದರು. ತಿ.ನರಸೀಪುರ ತಾಲೂಕಿನ ಯುವ ಬ್ರಿಗೇಡ್ ಕಾರ್ಯಕರ್ತ ಮೃತ ವೇಣುಗೋಪಾಲ್ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಶ್ರೀರಾಮುಲು ವೇಣುಗೋಪಾಲ್ ಪತ್ನಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು " ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಮೋಸ ವಂಚನೆಯಿಂದ ಕೊಲ್ಲುತ್ತಾರೆ" ಎಂದು ಆಡಳಿತ ಪಕ್ಷದ ವಿರುದ್ಧ ಗುಡುಗಿದರು. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ.

ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಇಲ್ಲಿ(ಮೈಸೂರು) ಧರ್ಮದ ವಿಚಾರವಾಗಿ ನಡೆದಿರುವ ಕೊಲೆ ಇದು. ಧರ್ಮ ಅಂತ ಬಂದಾಗ ನಾವೆಲ್ಲ ಒಂದೆ. ಇದರಲ್ಲಿ ಯಾವುದೇ ಪಕ್ಷ ಎನ್ನುವುದು ಇಲ್ಲ. ಕೊಲೆಯ ಬಗ್ಗೆ ಸಂಪೂರ್ಣ ತನಿಖೆ ನಡೆದರೆ ಯಾರ ಕುಮ್ಮಕ್ಕಿನಿಂದ ಆಗಿರುವುದು ಎಂಬುದು ಗೊತ್ತಾಗುತ್ತದೆ. ವೇಣುಗೋಪಾಲ್ ಫೋನ್ ಪರಿಶೀಲನೆ ಮಾಡಿದರೆ ಯಾರೆಲ್ಲ ಕರೆ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ. ವೇಣುಗೋಪಾಲ್ ಹಿಂದೂ ಸಂಘಟನೆಯಲ್ಲಿ ಕೆಲಸ ಮಾಡಿದ್ದ. ಹನುಮ ಜಯಂತಿ ಮಾಡಿದ್ದಾನೆ. ಆತ ಯಾವುದೇ ಕ್ರಿಮಿನಲ್ ಕೆಲಸ ಮಾಡಿಲ್ಲ ಎಂದು ಹರಿಹಾಯ್ದರು.

'ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳ ಹತ್ಯೆಗಳಾಗುತ್ತವೆ': ಇದಕ್ಕೂ ಮೊದಲುಇಲ್ಲಿನ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆಗಳಾಗುತ್ತವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಎಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು.

"ಜೈನ ಮುನಿ ಕೊಲೆ ಪ್ರಕರಣವನ್ನು ಸಿಬಿಐಗೆ ನೀಡುವುದಿಲ್ಲ. ನಮ್ಮ ಪೊಲೀಸರೇ ಸಮರ್ಥರಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಆದರೆ, ಪೊಲೀಸರು ಪ್ರಭಾವಕ್ಕೆ ಒಳಗಾಗಿ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡುವುದು ಕಷ್ಟ. ಆ ಕಾರಣಕ್ಕಾಗಿ ನಿಷ್ಪಕ್ಷಪಾತ ತನಿಖೆಗಾಗಿ ವೇಣುಗೋಪಾಲ್ ಹಾಗೂ ಜೈನಮುನಿ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು" ಎಂದು ಆಗ್ರಹಿಸಿದರು.

ಇದನ್ನೂ ಓದಿ:ಯುವ ಬ್ರಿಗೇಡ್​ ಕಾರ್ಯಕರ್ತನ ಕೊಲೆ ಪ್ರಕರಣ: ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಸುನೀಲ್ ಬೋಸ್ ತೀರುಗೇಟು

ರಾಜ್ಯದಲ್ಲಿ ಎರಡು ತಿಂಗಳಲ್ಲಿ 40 ಕೊಲೆಗಳಾಗಿವೆ. ನಿನ್ನೆ ಬೆಂಗಳೂರಿನಲ್ಲಿ ಹಾಡಹಗಲೇ ಕೊಲೆಯಾಗಿದ್ದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೊಲೆ, ಸುಲಿಗೆ, ದೌರ್ಜನ್ಯಗಳು ನಡೆಯುತ್ತಿವೆ. ಸಿಎಂ ಕ್ಷೇತ್ರದಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಂದ ಮೇಲೆ ರಾಜ್ಯದ ಭಾಗಗಳಲ್ಲಿ ಪರಿಸ್ಥಿತಿಯನ್ನು ಯೋಚಿಸಬೇಕಾಗಿದೆ ಎಂದರು.

ಇದನ್ನೂ ಓದಿ:Mysore crime: ಯುವ ಬ್ರಿಗೇಡ್ ಸದಸ್ಯನ ಕೊಲೆ ಪ್ರಕರಣ.. ಎಸ್​ಪಿ ಹೇಳಿದ್ದೇನು?

Last Updated : Jul 12, 2023, 8:51 PM IST

ABOUT THE AUTHOR

...view details