ಕರ್ನಾಟಕ

karnataka

ಬಜೆಟ್ 2023ರ ನಿರೀಕ್ಷೆ: ರೈತರ ಸಮಸ್ಯೆ ಬಗೆಹರಿಸುವಂತೆ ಕುರುಬೂರು ಶಾಂತಕುಮಾರ ಮನವಿ

By

Published : Jan 31, 2023, 1:28 PM IST

ಕೇಂದ್ರ ಸರ್ಕಾರ ಬಜೆಟ್​​​​ನಲ್ಲಿ ರೈತರ ಸಮಸ್ಯೆ ಬಗೆಹರಿಸುವಂತೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

State President of Sugarcane Growers Association Kuruburu Shanthakumar
ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್

ಮೈಸೂರು: ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಬಜೆಟ್ ಅಲ್ಲಿ ಕ್ರಮ ಕೈಗೊಳ್ಳುವಂತೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮನವಿ ಮಾಡಿದ್ದಾರೆ. ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನಾತ್ಮಕ ಖಾತ್ರಿ ನೀಡುವ ಬಗ್ಗೆ ಪ್ರಧಾನಿ ಅವರಿಂದ ಭರವಸೆ ಜಾರಿಯಾಗಬೇಕು. ಕೃಷಿ ಉತ್ಪನ್ನಗಳ ಮೇಲೆ ರಸಗೊಬ್ಬರ, ಕೀಟನಾಶಕ ಹನಿ, ನೀರಾವರಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್ಟಿ ರದ್ದುಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರಸಕ್ತವಾಗಿರುವ ರೈತರ ಸಾಲ ನೀತಿ ಬದಲಾಯಿಸಿ, ಕೃಷಿ ಉತ್ಪಾದನಾ ಸಾಲ ಬಡ್ಡಿ ರಹಿತ ಮಾಡಬೇಕು. ಕೃಷಿ ಭೂಮಿ ಮೌಲ್ಯದ ಶೇಕಡ 75 ರಷ್ಟು ಸಾಲ ನೀಡುವಂತೆ ನೀತಿ ರೂಪಿಸಿಬೇಕು. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ಮಾನದಂಡ ಕೈಬಿಡಬೇಕು ಎಂದು ಆಗ್ರಹಿಸಿದರು. ಹಾಗೆ ಕಬ್ಬಿನ ಎಫ್​​​ಆರ್​​​​ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿಪಡಿಸಬೇಕು. ಆಕಸ್ಮಿಕ ಬೆಂಕಿಗೆ ಸುಟ್ಟು ಹೋದ ಕಬ್ಬಿನಿಂದ ಸಕ್ಕರೆ ಕಾರ್ಖಾನೆಗಳು ಶೆ. 25 ರಷ್ಟು ಹಣ ಕಡಿತ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಫ್​​ಆರ್​ಪಿ ದರ ಏರಿಕೆ ಮಾಡಬೇಕು:ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಕನಿಷ್ಠ 9:5 ಕ್ಕೆ ಇಳಿಸಬೇಕು, ಕಬ್ಬು ಉತ್ಪಾದನಾ ವೆಚ್ಚ ಏರಿಕೆಯಾಗಿರುವ ಕಾರಣ ಎಫ್​​​​ಆರ್ ಪಿ ದರವನ್ನು 2023-24ನೆ ಸಾಲಿಗೆ ಕನಿಷ್ಠ ಟನ್​ಗೆ 3,500 ರೂ ನಿಗದಿ ಮಾಡಬೇಕು, ಕಬ್ಬಿನಿಂದ ಉತ್ಪಾದಿಸುವ ಎಥಾನಲ್ ನೀತಿ ಬದಲಾಯಿಸಿ ಮುಕ್ತ ಅವಕಾಶ ಕಲ್ಪಿಸಬೇಕು, ರೈತರ ಬೆಲ್ಲದ ಗಾಣದಲ್ಲಿ ಉತ್ಪಾದನೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಲ್ಲ ಬೆಳೆಗಳಿಗೂ ವಿಮಾ ಯೋಜನೆ ಜಾರಿಗೆ ತನ್ನಿ: ಎಲ್ಲ ಕೃಷಿ ಉತ್ಪನ್ನ ಬೆಳೆಗಳಿಗೂ ಪಸಲ್ ಬಿಮಾ ಬೆಳೆ ವಿಮೆ ಯೋಜನೆ ಜಾರಿ ತರಬೇಕು. ಈ ಯೋಜನೆಗಳಿಗೆ ಕೆಲವು ತಿದ್ದುಪಡಿಗಳು ಆಗಬೇಕು. ಅತಿವೃಷ್ಟಿ - ಅನಾವೃಷ್ಟಿ ಆಕಸ್ಮಿಕ ಬೆಂಕಿ ಪ್ರವಾಹ ಹಾನಿ ಬೆಳೆ ನಾಶ ಪರಿಹಾರ ಮಾನದಂಡ ವೈಜ್ಞಾನಿಕವಾಗಿ ಬದಲಾಗಬೇಕು ಎಂದು ಹೇಳಿದ್ದು ಜೊತೆಗೆ ವನ್ಯಮೃಗಗಳ ಸಂರಕ್ಷಣೆ, ಮಾನವ ರಕ್ಷಣಾ ಕಾಯ್ದೆ ಕಾಡು ಪ್ರಾಣಿಗಳ ಹಾವಳಿ ತಡೆ ಕಾನೂನು 1972 ಕ್ಕೆ ತಿದ್ದುಪಡಿ ತರಬೇಕು, ಕಾಡು ಪ್ರಾಣಿಗಳ ದಾಳಿಗೆ ತುತ್ತಾದ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತ 50 ಲಕ್ಷ ರೂ.ಗಳಿಗೆ ಏರಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವೇ ಆರಂಭಿಸಿರುವ , ಕೊರೊ‌‌ನಾ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿರುವ ಎಲ್ಲ ರೈತ ಉತ್ಪಾದಕ ಸಂಸ್ಥೆಗಳಿಗೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ಹೊಸ ಸಾಲ ಎಂದು ಪರಿಗಣಿಸಿ ಕಾರ್ಯ ಯೋಜನೆಗಳನ್ನು ರೂಪಿಸಿಕೊಂಡು ಮುನ್ನಡೆಸಲು ಪುನಶ್ಚೇತನ ಸಾಲ ನೀಡಿ ಪ್ರೋತ್ಸಾಹಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಶಾಂತಕುಮಾರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್: 25ಕ್ಕೂ ಹೆಚ್ಚು ಜ್ಯುವೆಲ್ಲರಿ ಶಾಪ್​ಗೆ ನುಗ್ಗಿದ ಅಧಿಕಾರಿಗಳು!​

ABOUT THE AUTHOR

...view details