ಕರ್ನಾಟಕ

karnataka

ನಾರಾಯಣಪುರ ಡ್ಯಾಮ್​ನಿಂದ ಮೂರುವರೆ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ಕೃಷ್ಣಾ ತೀರದಲ್ಲಿ ಪ್ರವಾಹ ಭೀತಿ

By

Published : Jul 24, 2021, 8:12 AM IST

ರಾಯಚೂರಿನ ನಾರಾಯಣಪುರ ಜಲಾಶದಿಂದ ಹೆಚ್ಚವರಿ ನೀರನ್ನು ನದಿಗೆ ಹರಿಸಲಾಗಿದ್ದು, ಲಿಂಗಸುಗೂರು, ದೇವದುರ್ಗ, ರಾಯಚೂರು ತಾಲೂಕುಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

Narayanapura Reservoir
ನಾರಾಯಣಪುರ ಜಲಾಶಯ

ರಾಯಚೂರು : ಜಿಲ್ಲೆಯ ನಾರಾಯಣಪುರ (ಬಸವಸಾಗರ) ಜಲಾಶಯದಿಂದ ಮೂರುವರೆ ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬಿಡಲಾಗಿದ್ದು, ನದಿ ಪಾತ್ರದ ಪ್ರದೇಶಗಳಾದ ಲಿಂಗಸುಗೂರು, ದೇವದುರ್ಗ, ರಾಯಚೂರು ತಾಲೂಕುಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ.

ಇಂದು ಬೆಳಗ್ಗೆ 7 ಗಂಟೆಗೆ ಜಲಾಶಯದಿಂದ 3.5 ಲಕ್ಷ ಕೂಸೆಕ್ ನೀರನ್ನು ಕ್ರಸ್ಟ್‌ ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ಹರಿಸಲಾಗಿದೆ. ಇದರ ಪರಿಣಾಮ ದೇವದುರ್ಗ ತಾಲೂಕಿನ ಹೂವಿನಹೆಡಗಿ ಸೇತುವೆ ಸಂಪೂರ್ಣ ಮುಳಗಡೆಯಾಗಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ದೇವದುರ್ಗದಿಂದ ಕಲಬುರಗಿ, ಶಹಾಪುರ, ಸುರಪುರಕ್ಕೆ ಸಂರ್ಪಕ ಕಲ್ಪಿಸುವ ಪ್ರಮುಖ ಸೇತುವೆ ಇದಾಗಿದೆ.

ಓದಿ : ಚುರುಕು ಪಡೆದ ಮುಂಗಾರು: ಕೆಆರ್​ಎಸ್​​​ನಲ್ಲಿ 104.38 ಅಡಿ ನೀರು ಸಂಗ್ರಹ

ಈಗಾಗಲೇ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ ನಡುಗಡ್ಡೆ ಪ್ರದೇಶಗಳಿಗೆ ಸಂರ್ಪಕ ಕಡಿತಗೊಂಡಿದೆ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಹೆಚ್ಚುವರಿ ನೀರಿನ ನದಿಗೆ ಹರಿಸಲಾಗುತ್ತಿದೆ.

ಜಲಾಶಯದಿಂದ ನೀರು ಹರಿ ಬಿಟ್ಟಿರುವ ಹಿನ್ನೆಲೆ ಜನ, ಜಾನುವಾರು ನದಿ ತೀರಕ್ಕೆ ತೆರಳದಂತೆ ಡಂಗುರ, ಮೈಕ್‌ಗಳ ಮೂಲಕ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ABOUT THE AUTHOR

...view details