ಕರ್ನಾಟಕ

karnataka

ಟ್ರ್ಯಾಕ್ಟರ್​-ಬೈಕ್​​ ನಡುವೆ ಡಿಕ್ಕಿ: ಓರ್ವ ಸಾವು

By

Published : Feb 24, 2020, 11:09 PM IST

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

raichur
ಟ್ರಾಕ್ಟರ್, ಬೈಕ್ ನಡುವೆ ಡಿಕ್ಕಿ

ರಾಯಚೂರು: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಟ್ರ್ಯಾಕ್ಟರ್-ಬೈಕ್ ನಡುವೆ ಅಪಘಾತ

ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿಹಾಳ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಸಿರುಗುಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸಿದ್ದಪ್ಪ ಯಮನಪ್ಪ(55) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಾಗಲಾಪುರ ಗ್ರಾಮದಿಂದ ಸಿಂಧನೂರು ತಿಡಿಗೋಳ ಗ್ರಾಮಕ್ಕೆ ಸಿದ್ದಪ್ಪ ಹಾಗೂ ಆತನ ಸಂಬಂಧಿಕರು ಮೂವರು ಬೈಕ್ ಮೇಲೆ ತೆರಳುತಿದ್ದರು. ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದ್ದು, ಘಟನೆಯಿಂದ ಟ್ರ್ಯಾಕ್ಟರ್ ಹಾಗೂ ಬೈಕ್ ಭತ್ತದ ಗದ್ದೆಯಲ್ಲಿ ಬಿದ್ದಿವೆ. ಸದ್ಯ ಗಾಯಗೊಂಡವರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಸಂಬಂಧ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details