ಕರ್ನಾಟಕ

karnataka

ರಾಯಚೂರು: ಪಲ್ಟಿಯಾದ ಟ್ಯಾಂಕರ್‌ನಿಂದ ಪೆಟ್ರೋಲ್‌ ತುಂಬಿಸಿಕೊಳ್ಳಲು ಮುಗಿಬಿದ್ದ ಜನ

By

Published : May 13, 2022, 7:41 AM IST

ಪೆಟ್ರೋಲ್ ತುಂಬಿದ ಟ್ಯಾಂಕರ್ ರಾಯಚೂರಿನಿಂದ ಹುಣಸಿಗಿ ಮಾರ್ಗವಾಗಿ ಹೋಗುತ್ತಿದ್ದಾಗ ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ಪಲ್ಟಿಯಾಯಿತು. ಈ ಸುದ್ದಿ ತಿಳಿದ ಸ್ಥಳೀಯರು ಸ್ಥಳಕ್ಕಾಗಮಿಸಿ ನಾ ಮುಂದು ತಾ ಮುಂದು ಎಂದು ಪೆಟ್ರೋಲ್ ತುಂಬಿಸಿಕೊಂಡರು.

ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ
ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ನಡೆದಿದೆ. ಟ್ಯಾಂಕರ್‌ನಿಂದ ಪೆಟ್ರೋಲ್ ಸೋರಿಕೆಯಾಗುತ್ತಿದ್ದು, ಸುತ್ತಮುತ್ತಲಿನ ದುಂಬಾಲು ಬಿದ್ದು ತೈಲ​ ತುಂಬಿಕೊಳ್ಳಲು ಮುಗಿಬಿದ್ದ ದೃಶ್ಯ ಕಂಡುಬಂತು.

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಜನರನ್ನು ತಡೆಯಲು ಪ್ರಯತ್ನಿಸಿದರು. ಆದ್ರೆ, ಸಿಬ್ಬಂದಿ ಮಾತು ಕೇಳದ ಜನರು ವಾಟರ್ ಬಾಟಲ್, ಬಕೆಟ್, ಕೊಡಗಳಲ್ಲಿ ಪೆಟ್ರೋಲ್ ತುಂಬಿಕೊಂಡರು. ಪೊಲೀಸರು ಭೇಟಿ ನೀಡಿ, ಜನರನ್ನು ಚದುರಿಸಿದರು.


ಟ್ಯಾಂಕರ್ ರಾಯಚೂರಿನಿಂದ ಹುಣಸಿಗಿ ಮಾರ್ಗವಾಗಿ ಹೋಗುತ್ತಿದ್ದಾಗ ಪಲ್ಟಿಯಾಗಿದೆ. ಗಾಯಾಳು ಚಾಲಕನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಪಿಎಸ್ಐ ಅಕ್ರಮ: ಕೆಎಸ್‌ಆರ್‌ಪಿ ಅಸಿಸ್ಟೆಂಟ್‌ ಕಮಾಂಡೆಂಟ್‌ ಅಮಾನತು

ABOUT THE AUTHOR

...view details