ಕರ್ನಾಟಕ

karnataka

ಎಪಿಎಂಸಿ-ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

By

Published : Aug 17, 2020, 3:37 PM IST

ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ. ಆದ್ರೆ ಈ ಕಾಯ್ದೆ ರೈತರಿಗೆ ಮಾರಕವಾಗಿದೆ ಎಂದು ಆರೋಪಿಸಿ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Protest
Protest

ರಾಯಚೂರು: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ಮಸೂದೆ ಜಾರಿಗೊಳಿಸಿರುವುದನ್ನು ಖಂಡಿಸಿ ಜೆಡಿಎಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಜೆಡಿಎಸ್ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ. ಆದ್ರೆ ಈ ಕಾಯ್ದೆ ರೈತರಿಗೆ ಮಾರಕವಾಗಿದೆ. ಕಾಯ್ದೆ ತಿದ್ದುಪಡಿ ಮಾಡಿ ಜಾರಿ ಮಾಡುವಾಗ ಸಾಧಕ-ಬಾಧಕಗಳನ್ನು ಚರ್ಚಿಸಿದೆ ಸುಗ್ರೀವಾಜ್ಞೆ ಹೊರಡಿಸಿದೆ. ಈ ಆದೇಶವನ್ನು ಜೆಡಿಎಸ್ ತೀವ್ರವಾಗಿ ಖಂಡಿಸುತ್ತಿದ್ದು, ಸರ್ಕಾರ ಕೂಡಲೇ ಈ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕೆಂದು ಜಿಲ್ಲಾಧಿಕಾರಿ ಮುಖೇನ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಶಾಸಕರಾದ ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಜಿಲ್ಲಾಧ್ಯಕ್ಷ ಎಂ.ವೀರುಪಾಕ್ಷಿ, ಮುಖಂಡರಾದ ಮಹಾತೇಶ್ ಪಾಟೀಲ್ ಅತ್ತನೂರು, ಎನ್.ಶಿವಶಂಕರ, ಪವನ್‌ಕುಮಾರ್ ಇತರೆ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ರು.

ABOUT THE AUTHOR

...view details