ಕರ್ನಾಟಕ

karnataka

ಸಹೋದರನಿಗೆ ಕೊರೊನಾ: ಶಾಸಕ ವೆಂಕಟರಾವ್ ನಾಡಗೌಡ ಹೋಂ ಕ್ವಾರಂಟೈನ್

By

Published : Jul 20, 2020, 5:15 PM IST

ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಅವರು ಇಂದಿನಿಂದ 10 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಿದ್ದಾರೆ.

ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ
ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ

ರಾಯಚೂರು: ಸಹೋದರನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಹೋಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ಜಿಲ್ಲೆಯ ಸಿಂಧನೂರು ಪಟ್ಟಣದ ಪಿಡಬ್ಲ್ಯೂಡಿ ಕಾಲೋನಿಯಲ್ಲಿರುವ ಮನೆಯಲ್ಲಿ ಇಂದಿನಿಂದ 10 ದಿನಗಳ ಕಾಲ ಕ್ವಾರಂಟೈನ್ ಆಗಿದ್ದಾರೆ. ಹೀಗಾಗಿ ನನ್ನನ್ನು ಯಾರೂ ಭೇಟಿ ಮಾಡಲು ಬರಬೇಡಿ. ಮುಖ್ಯವಾದ ಕೆಲಸವಿದ್ದರೆ ದೂರವಾಣಿ ಮೂಲಕ ಸಂಪರ್ಕಿಸುವಂತೆ ವಾಟ್ಸ್ ಅಪ್ ಮೂಲಕ ಕ್ಷೇತ್ರದ ಜನತೆಗೆ ಮನವಿ ಮಾಡಿದ್ದಾರೆ.

ಇನ್ನು ಶಾಸಕ ವೆಂಕಟರಾವ್ ನಾಡಗೌಡ ಸಹೋದರನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಸಕರ ಗಂಟಲು ದ್ರವ ಪರೀಕ್ಷೆಗೆ ನೀಡಲಾಗಿದೆ. ವರದಿ ಬರುವುದು ಬಾಕಿಯಿದೆ.

ರಾಯಚೂರು, ಸಿಂಧನೂರು ನಗರಗಳಲ್ಲಿ ಹೆಚ್ಚಾಗಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಕಳೆದ 15 ರಿಂದ 22 ರವರೆಗೆ ಲಾಕ್​ಡೌನ್ ಜಾರಿ ಮಾಡಲಾಗಿದೆ.

ABOUT THE AUTHOR

...view details