ಕರ್ನಾಟಕ

karnataka

ಈ ಸಂದರ್ಭದಲ್ಲಿ ಕರ್ನಾಟಕ ಬಂದ್ ಮಾಡುವುದು ಬೇಡ : ಎಸ್.ಟಿ. ಸೋಮಶೇಖರ್

By

Published : Dec 25, 2021, 8:04 PM IST

ಕೋವಿಡ್ ನಿಂದ ಈಗತಾನೆ ಚೇತರಿಸಿಕೊಳ್ಳುತ್ತಿದ್ದೇವೆ, ಇಂತಹ ಸಂದರ್ಭದಲ್ಲಿ ಕರ್ನಾಟಕ ಬಂದ್ ಮಾಡುವುದು ಬೇಡ. ಪುಂಡಾಟಿಕೆ ನಡೆಸಿದ ಎಂಇ ಎಸ್. ಕಾರ್ಯಕರ್ತರ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಿದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ವತಃ ಸಿಎಂ ಸೂಚನೆ ನೀಡಿದ್ದಾರೆ..

ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ
ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ

ಮೈಸೂರು/ರಾಮನಗರ : ಎಂಇಎಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ವತಃ ಸಿಎಂ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡುವುದು ಬೇಡ ಎಂದು ಸಚಿವ ಎಸ್.ಟಿ. ಸೋಮಶೇಖರ್ ಮನವಿ ಮಾಡಿದರು.

ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಿದ ನಂತರ ಮಾತನಾಡಿದ ಅವರು, ಕೋವಿಡ್‌ನಿಂದ ಈಗತಾನೆ ಚೇತರಿಸಿಕೊಳ್ಳುತ್ತಿದ್ದೇವೆ, ಇಂತಹ ಸಂದರ್ಭದಲ್ಲಿ ಕರ್ನಾಟಕ ಬಂದ್ ಮಾಡುವುದು ಬೇಡ.

ಪುಂಡಾಟಿಕೆ ನಡೆಸಿದ ಎಂಇಎಸ್ ಕಾರ್ಯಕರ್ತರ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸ್ವತಃ ಸಿಎಂ ಸೂಚನೆ ನೀಡಿದ್ದಾರೆ ಎಂದರು.

ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ ನೀಡಿರುವುದು..

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಕೇವಲ ದೊಡ್ಡ ಗಿಮಿಕ್ಸ್. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ‌ ಸಿಎಂ ಬಿ.ಎಸ್. ಯಡಿಯೂರಪ್ಪನವರು ಕೇಂದ್ರ ನಾಯಕರನ್ನ ಭೇಟಿ ಮಾಡಿ ಯೋಜನೆ ಜಾರಿಗೆ ಮಾಡುವಂತೆ ಒತ್ತಾಯಿಸಿದ್ದಾರೆ. ಶೀಘ್ರದಲ್ಲೇ ಮೇಕೆದಾಟು ಯೋಜನೆಗೆ ಅನುಮತಿ ಸಿಗಲಿದೆ. ಇದನ್ನ ತಿಳಿದ ಕಾಂಗ್ರೆಸ್ ನಾಯಕರು ಪಾದಯಾತ್ರೆಯ ದೊಡ್ಡ ಗಿಮಿಕ್ಸ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕೈಗೊಂಡಿರುವ ಮೇಕೆದಾಟು ಪಾದಯಾತ್ರೆಯನ್ನ ಟೀಕೆಸಿದರು.

ಡಿ.ಕೆ.ಶಿವಕುಮಾರ್ ಶಾಶ್ವತ ಸಿಎಂ ಆಗಲಿ :

ಪಾದಯಾತ್ರೆ ಮಾಡಿದರೆ ಸಿಎಂ ಆಗುತ್ತೇನೆ ಎಂಬ ಕನಸನ್ನ ಡಿ.ಕೆ. ಶಿವಕುಮಾರ್ ಕಾಣುತ್ತಿದ್ದಾರೆ. ಅವರು ಮುಖ್ಯಮಂತ್ರಿ ಚಂದ್ರು ರೀತಿಯಲ್ಲಿ ಶಾಶ್ವತ ಸಿಎಂ ಆಗಬೇಕೆಂದು ವ್ಯಗ್ಯವಾಡಿದರು.

ಇನ್ನೂ ಚನ್ನಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೇವಲ ಮಾದ್ಯಮಗಳ‌ ಸುದ್ದಿಯಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರುಗಳು ಬೊಮ್ಮಾಯಿಯವರೆ ಮುಂದಿನ ಚುನಾವಣೆಯವರೆಗೂ ಇರುತ್ತಾರೆ ಎಂದು ಹೇಳಿದ್ದಾರೆ. ಇವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸಲಾಗುತ್ತದೆ ಎಂದು ಖುದ್ದು ಅಮಿಶ್ ಶಾ ಅವರು ಬಹಿರಂಗ ವೇದಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಹೀಗ್ಗಿದ್ದರು ಮುಖ್ಯಮಂತ್ರಿ ಬದಲಾವಣೆ ವಿಚಾರ ಪ್ರಸ್ತುತ ಅಲ್ಲ, ಅದು ಅಪ್ರಸ್ತುತ. ಸಚಿವ ಸಂಪುಟ ಪುನರ್ ರಚನೆಯ ಮಾತುಗಳು ಕೇಳಿಬರುತ್ತಿದ್ದು ಇದು ನನಗೆ ಗೊತ್ತಿಲ್ಲ. ಸಚಿವ ಸಂಪುಟದ ಪುನರ್ ರಚನೆ ಸಿಎಂ ಪರಮಾಧಿಕಾರ ಎಂದ ಸಚಿವರು ನಿಮ್ಮ ಖಾತೆ ಬದಲಾವಣೆ ಆಗುತ್ತದೆಯೆ ಎಂಬ ಪ್ರಶ್ನೆಗೆ ಸಚಿವರು ನನ್ನ ಖಾತೆಯ ಮೇಲೆ ನಿಮಗೆ ಯಾಕೆ ಕಣ್ಣು ಎಂದು ಹಾಸ್ಯ ಚಟಾಕೆ ಹಾರಿಸಿದರು.

ನಾನು ಬಿಜೆಪಿಯಲ್ಲಿಯೇ ಇದ್ದೇನೆ ಪಕ್ಷ ಬಿಡಲ್ಲ :

ಸದ್ಯ ನಾನು ಬಿಜೆಪಿಯಲ್ಲಿ ಇದ್ದೇನೆ, ಮುಂದೆಯೂ ಇರುತ್ತೇನೆ. ನಾನು ಬಿಜೆಪಿ ಪಕ್ಷ ಬಿಡುವ ಸಂದರ್ಭ ಇಲ್ಲವೆಂದರು. ಕಾರಣಾಂತರದಿಂದ ಕಾಂಗ್ರೆಸ್ ಬಿಡಬೇಕಾಯ್ತು. ಆದರೆ ಮತ್ತೆ ಕಾಂಗ್ರೆಸ್​​ಗೆ ಹೋಗುವ ಪ್ರಮೇಯವೇ ಇಲ್ಲ. ನನಗೆ ಬಿಜೆಪಿ ಪಕ್ಷ ಶಾಸಕನಾಗಿ ಮಾಡಿದೆ, ಮಂತ್ರಿ ಮಾಡಿದೆ ಎಂದರು.

ಡಿ.ಕೆ.ಶಿವಕುಮಾರ್ ರವರು ನಮಗೆ ಆತ್ಮೀಯ ಸ್ನೇಹಿತರು. ನಮ್ಮ ಅವರ ವಯಕ್ತಿಕ ವಿಶ್ವಾಸ ಚೆನ್ನಾಗಿದೆ. ಆದರೆ ರಾಜಕೀಯ ವಿಶ್ವಾಸ ನಮಗೆ ಇಲ್ಲ. ನನ್ನ ರಾಜಕೀಯ ಬೆಳವಣಿಗೆಗೆ ಅವರು ಸಹಾಯ ಮಾಡಿದ್ದಾರೆ. ಅವರು ನನಗೆ ಕಾಂಗ್ರೆಸ್ ಬಾರಯ್ಯ ಎಂದು ಕರೆದಿಲ್ಲ. ನಾನು ಸಹ ಬರ್ತೇನೆಂದು ಎಲ್ಲೂ ಹೇಳಿಲ್ಲವೆಂದು ಸ್ಪಷ್ಟಪಡಿಸಿದರು.

TAGGED:

ABOUT THE AUTHOR

...view details