ಕರ್ನಾಟಕ

karnataka

ರಾಮನಗರ: ಎರಡು ಬೈಕ್​ಗಳ ನಡುವೆ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

By

Published : Aug 29, 2021, 9:33 AM IST

ರಾಮನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

three died
ಬೈಕ್​ಗಳ ಮಧ್ಯೆ ಡಿಕ್ಕಿ

ರಾಮನಗರ: ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರದ ರಾಯರದೊಡ್ಡಿ ಬಳಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ನಡೆದಿದೆ.

ಬಾಲಗೇರಿಯ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತ ಯುವಕರು. ಬೈಕ್ ಸವಾರರಿಬ್ಬರು ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಯುವಕರ ಮೃತ ದೇಹವನ್ನು ರಾಮನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details