ಕರ್ನಾಟಕ

karnataka

ಭದ್ರಾವತಿ, ಸಾಗರದಲ್ಲಿ ಪೊಲೀಸರ ಕಾರ್ಯಾಚರಣೆ: 4 kg ಗಾಂಜಾ ವಶ

By

Published : Jul 10, 2021, 5:41 AM IST

ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ 3.554 ಗ್ರಾಂ ಗಾಂಜಾ ವಶಕ್ಕೆ ಪಡೆದು 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

gaanja_arrest
gaanja_arrest

ಶಿವಮೊಗ್ಗ: ಭದ್ರಾವತಿ ಹಾಗೂ ಸಾಗರದ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ 3.554 ಗ್ರಾಂ ಗಾಂಜಾ ವಶಕ್ಕೆ ಪಡೆದು 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಭದ್ರಾವತಿ ತಾಲೂಕು ಲಕ್ಕಿನಕೊಪ್ಪದ ಬಳಿ ಬೈಕ್ ನಲ್ಲಿ ಗಾಂಜಾ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಇಎನ್ ಪೊಲೀಸ್ ಠಾಣೆಯ ಪಿಐ ಗುರುರಾಜ್ ಹಾಗೂ ಕೋಟೆ ಪೊಲೀಸ್ ಠಾಣೆಯ ಪಿಐ ಚಂದ್ರಶೇಖರ್ ತಂಡ ದಾಳಿ ನಡೆಸಿ, ಭದ್ರಾವತಿಯ ಜೀವನ್.ಎಂ (21), ಶರವಣ(35) ಹಾಗೂ ಜೀವನ್.ಕೆ(21) ಬಂಧಿಸಿ ಇವರಿಂದ 3 ಕೆ.ಜಿ 380 ಗ್ರಾಂ ಗಾಂಜಾ ಹಾಗೂ ಬೈಕ್ ಅನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ.

ಇವರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details