ಕರ್ನಾಟಕ

karnataka

ಈಶ್ವರಪ್ಪ ದೂರಿನ ಕುರಿತು ಸಮಗ್ರ ತನಿಖೆ : ಎಸ್ಪಿ ಮಿಥುನ್ ಕುಮಾರ್

By

Published : May 15, 2023, 4:39 PM IST

ಕಳೆದ ಮಧ್ಯರಾತ್ರಿ 12:30ಕ್ಕೆ ತಮಗೆ ಕಜಕಿಸ್ಥಾನದಿಂದ ಬೆದರಿಕೆಯ ಕರೆ ಬಂದಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಪೊಲೀಸರಿಗೆ​ ದೂರು ಸಲ್ಲಿಸಿದ್ದಾರೆ.

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್​ ಠಾಣೆಗೆ ದೂರು ಸಲ್ಲಿಕೆ
ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್​ ಠಾಣೆಗೆ ದೂರು ಸಲ್ಲಿಕೆ

ಎಸ್ಪಿ ಮಿಥುನ್ ಕುಮಾರ್ ಅವರು ಮಾತನಾಡಿದರು

ಶಿವಮೊಗ್ಗ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಕಜಕಿಸ್ಥಾನದಿಂದ ಮಿಸ್ ಕಾಲ್ ಬಂದಿರುವ ಕುರಿತು ಜಿಲ್ಲಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಸಮಗ್ರವಾಗಿ ತನಿಖೆ ನಡೆಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಇಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ತಮಗೆ ಭಾನುವಾರ ರಾತ್ರಿ ಕಜಕಿಸ್ಥಾನದಿಂದ 12:30 ಕ್ಕೆ‌ ಮತ್ತು ಬೆಳಗ್ಗೆ 7:30ಕ್ಕೆ ಮಿಸ್ ಕಾಲ್ ಬಂದಿವೆ ಎಂದು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ದೂರನ್ನು ಸ್ವೀಕಾರ ಮಾಡಲಾಗಿದೆ. ಈ ಕುರಿತು ಸಮಗ್ರವಾಗಿ ತನಿಖೆ ನಡೆಸಲಾಗುವುದು ಎಂದರು.

ಅಲ್ಲದೆ ತಮ್ಮ ದೂರಿನಲ್ಲಿ ಈ ಹಿಂದೆ ತಮಗೆ ಬೆದರಿಕೆ ಕರೆ ಬಂದಿದ್ದು ಹಾಗೂ ತಮ್ಮನ್ನು‌ ಕೊಲೆ ಮಾಡಲು‌ ಶಂಕಿತ ಉಗ್ರ ಪ್ರಯತ್ನ‌ ಮಾಡ್ತಾ ಇದ್ದ ಎಂಬುದು ಎನ್​ಐಎ ತನಿಖೆಯಿಂದ ಹೊರ‌ ಬಂದಿದೆ ಎಂಬ ಅಂಶವನ್ನು ಈಶ್ವರಪ್ಪ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಎಸ್​ಪಿ ವಿವರಿಸಿದರು.

ಸಮಗ್ರವಾಗಿ ತನಿಖೆ ನಡೆಸುವಂತೆ ಎಸ್​ಪಿಗೆ ದೂರು: ಈ ಕುರಿತು ನಮ್ಮ ಇಲಾಖೆಯು ಸೂಕ್ತವಾಗಿ, ಸಮಗ್ರವಾಗಿ ತನಿಖೆ ನಡೆಸುತ್ತದೆ. ತಪ್ಪಿತಸ್ಥರಿಗೆ ಸೂಕ್ತವಾದ ಶಿಕ್ಷೆಯನ್ನು ನೀಡಲಾಗುತ್ತದೆ ಎಂದರು. ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಎಸ್​ಪಿ ಅವರಿಗೆ ಲಿಖಿತವಾಗಿ ದೂರು ಸಲ್ಲಿಸಿದ್ದರು.

ಇದನ್ನೂ ಓದಿ:135 ಸ್ಥಾನಗಳೇ ನನಗೆ ರಾಜ್ಯದ ಜನರು ನೀಡಿದ ಜನ್ಮದಿನದ ಬಹುದೊಡ್ಡ ಗಿಫ್ಟ್​: ಡಿ ಕೆ ಶಿವಕುಮಾರ್​

ಜಯಮೃತ್ಯುಂಜಯ ಶ್ರೀಗಳಿಗೆ ಪೊಲೀಸ್ ಭದ್ರತೆ ನೀಡಲು ಮಾಜಿ ಸಿಎಂ ಸೂಚನೆ: ಕೂಡಲಸಂಗಮ ಪೀಠದ ಬಸವ ಜಯಮೃತ್ಯಂಜಯ ಸ್ವಾಮೀಜಿ ಅವರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆ ಪೊಲೀಸ್ ಭದ್ರತೆ ಕಲ್ಪಿಸಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (ಏಪ್ರಿಲ್ 3 -2023) ಸೂಚನೆ ನೀಡಿದ್ದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮಗೋಷ್ಟಿ ನಡೆಸಿದ್ದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು, ಸರ್ಕಾರದ ಮೀಸಲಾತಿ ಘೋಷಣೆಯನ್ನು ಒಪ್ಪಿಕೊಂಡಿದ್ದಕ್ಕೆ ಕೂಡಲಸಂಗಮ ಶ್ರೀಗಳಿಗೆ ಬೆದರಿಕೆ ಕರೆಗಳು ಬರುತ್ತಿವೆ. ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ನಾಯಕರಿಂದಲೇ ಬೆದರಿಕೆ ಕರೆ ಬರುತ್ತಿವೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ:ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರದ ಚುಕ್ಕಾಣಿ: ಪೊಲೀಸ್ ಇಲಾಖೆಯಲ್ಲಿ ನಡೆಯಲಿದೆಯಾ ಮೇಜರ್ ಸರ್ಜರಿ?

ಬಳಿಕ ಅರವಿಂದ್​ ಬೆಲ್ಲದ್​ ಅವರು ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಈ ಕುರಿತು ಮಾಹಿತಿ ನೀಡಿ, ಸೂಕ್ತ ಭದ್ರತೆಯನ್ನು ಶ್ರೀಗಳಿಗೆ ಕಲ್ಪಿಸುವಂತೆ ಮನವಿ ಮಾಡಿದ್ದರು. ಪ್ರತಿ ದಿನವೂ ಶ್ರೀಗಳಿಗೆ ದೂರವಾಣಿ ಕರೆಗಳು ಬರುತ್ತಿದ್ದು, ನಿಂದನಾತ್ಮಕವಾದ ಮಾತುಗಳನ್ನಾಡುತ್ತಾರೆ. ಕೆಲವರು ಕುಡಿದು ಸಹ ಮಾತನಾಡಿ ಶ್ರೀಗಳ ಮನನೋಯಿಸುತ್ತಿದ್ದಾರೆ. ಇನ್ನೂ ಕೆಲವು ಕರೆಗಳು ಬೆದರಿಕೆ ಕರೆಗಳಾಗಿವೆ. ಹೀಗಾಗಿ ಶ್ರೀಗಳಿಗೆ ಸೂಕ್ತ ಭದ್ರತೆಯ ಅಗತ್ಯವಿದೆ ಮಾಜಿ ಸಿಎಂಗೆ ಮನವಿ ಮಾಡಿದ್ದರು.

ಇದನ್ನೂ ಓದಿ:ಬೆದರಿಕೆ ಕರೆ ಆರೋಪ: ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ ಪೊಲೀಸ್ ಭದ್ರತೆ ನೀಡಲು ಸಿಎಂ ಸೂಚನೆ..!

ABOUT THE AUTHOR

...view details