ಕರ್ನಾಟಕ

karnataka

10 ವರ್ಷ ಯಡಿಯೂರಪ್ಪನವರು ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ: ಜಯಮೃತ್ಯುಂಜಯ ಸ್ವಾಮೀಜಿ

By

Published : Dec 30, 2021, 5:12 PM IST

ಮೀಸಲಾತ8ಇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ವಿರುದ್ಧ ಕೂಡಲಸಂಗಮ ಪೀಠದ ಜಗದ್ಗುರು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

Jayamrutunjaya Swamiji comments on yediyurappa
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಆರೋಪ

ಶಿವಮೊಗ್ಗ:ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಹತ್ತು ವರ್ಷಗಳ ಕಾಲ ಕೇವಲ ಮೂಗಿಗೆ ತುಪ್ಪ ಸವರುವ(ಹಚ್ಚುವ) ಕೆಲಸ ಮಾಡಿದ್ದಾರೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಆರೋಪ

ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೀಸಲಾತಿಗಾಗಿ ನಮ್ಮ ಹೋರಾಟ ಒಂದು ವರ್ಷ ಪೂರೈಸಿದೆ. ಈ ಒಂದು ವರ್ಷದ ಅವಧಿಯಲ್ಲಿ ಸರ್ಕಾರವು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಮೀಸಲಾತಿ ವಿಚಾರದಲ್ಲಿ ನಮಗೆ ಸ್ಪಂದಿಸುತ್ತಿದ್ದಾರೆ. ಬಜೆಟ್​ಗಿಂತ ಮುಂಚೆಯೇ ಮೀಸಲಾತಿ ಘೋಷಣೆ ಮಾಡುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದರು.

ವರ್ಷಾಚರಣೆ ಹಿನ್ನೆಲೆಯಲ್ಲಿ ಮೀಸಲಾತಿಗಾಗಿ ಪಂಚಮಸಾಲಿಗಳ ಜಾಗರಣೆ ಹಾಗೂ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜನವರಿ 14 ರಂದು ಕೂಡಲ ಸಂಗಮ ಪೀಠದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಮಂಕಾದ ಬಿಜೆಪಿ, ಚಿಗುರಿದ ಕಾಂಗ್ರೆಸ್, ಜೆಡಿಎಸ್​ ಧೂಳಿಪಟ!

TAGGED:

ABOUT THE AUTHOR

...view details