ಕರ್ನಾಟಕ

karnataka

ಶಿವಮೊಗ್ಗದಲ್ಲಿ ಕರಾಟೆ ಸ್ಪರ್ಧೆ ಆಯೋಜನೆ: ಗಮನಸೆಳೆದ ಪಂಚ್

By

Published : Oct 11, 2021, 11:00 PM IST

karate-competition

ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯನ್ನು ದಸರಾ ಹಬ್ಬದ ಪ್ರಯುಕ್ತ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ನಾನೂರಕ್ಕೂ ಹೆಚ್ಚು ಕರಾಟೆ ಪಟುಗಳು ಭಾಗವಹಿಸಿದ್ದರು.

ಶಿವಮೊಗ್ಗ: ಕಳೆದೆರಡು ವರ್ಷಗಳಿಂದ ಕೊರೊನಾ ಮಹಾಮಾರಿಯಿಂದಾಗಿ ಯಾವುದೇ ಕ್ರೀಡಾ ಸ್ಪರ್ಧೆಗಳು ನಡೆಯದೇ ಸಾವಿರಾರು ಯುವ ಕ್ರೀಡಾಪಟುಗಳು ಬೇಸತ್ತು ಹೋಗಿದ್ದರು. ಹಾಗಾಗಿ, ಈ ಬಾರಿಯ ನಾಡ ಹಬ್ಬ ದಸರಾ ಆಚರಣೆಯಲ್ಲಿ ಕರಾಟೆ ಸ್ಪರ್ಧೆ ಆಯೋಜಿಸುವ ಮೂಲಕ ಯುವ ಕರಾಟೆ ಪಟುಗಳಿಗೆ ಪ್ರೋತ್ಸಾಹ ನೀಡಲಾಯಿತು.

ಕರಾಟೆ ಸ್ಪರ್ಧೆ ಆಯೋಜನೆ ಬಗ್ಗೆ ಸ್ಪರ್ಧಾಳುಗಳು ಮಾತನಾಡಿದರು

ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯನ್ನು ದಸರಾ ಹಬ್ಬದ ಪ್ರಯುಕ್ತ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ನಾನೂರಕ್ಕೂ ಹೆಚ್ಚು ಕರಾಟೆ ಪಟುಗಳು ಭಾಗವಹಿಸಿದ್ದರು. ಒಟ್ಟು 83 ವಿಭಾಗದಲ್ಲಿ ಸ್ಪರ್ಧೆ ನಡೆಸಲಾಯಿತು.

ರಾಜ್ಯದ ಹದಿಮೂರು ಜಿಲ್ಲೆಗಳಿಂದ ಕರಾಟೆಪಟುಗಳು ಭಾಗವಹಿಸಿ ಸಂತಸ ವ್ಯಕ್ತಪಡಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳಿಗೆ ಪದಕ ಹಾಗೂ ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.

ಓದಿ:ಎಸಿ-ಡಿಸಿಗಳ ರೆವಿನ್ಯೂ ಕೋರ್ಟ್ ಕಲಾಪಗಳನ್ನು ಮುಂದೂಡದಂತೆ ಸೂಚಿಸಿ : ಹೈಕೋರ್ಟ್ ನಿರ್ದೇಶನ

ABOUT THE AUTHOR

...view details