ಕರ್ನಾಟಕ

karnataka

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದಿಬದಿ ವ್ಯಾಪಾರಿಗಳಿಂದ ಪತ್ರ ಚಳವಳಿ

By

Published : May 29, 2021, 8:52 AM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೀದಿಬದಿ ವ್ಯಾಪಾರಿಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯಲಾಗುತ್ತಿದೆ.

Letter movement
ಪತ್ರ ಚಳವಳಿ

ಶಿವಮೊಗ್ಗ:ಆತ್ಮ ನಿರ್ಭರ ಭಾರತ ಯೋಜನೆಯಡಿ ನೀಡಲಾಗುತ್ತಿರುವ ಸಹಾಯಧನದ ಮೊತ್ತವನ್ನು ಹೆಚ್ಚಿಸುವಂತೆ ಹಾಗೂ ಎಲ್ಲರಿಗೂ ಯೋಜನೆಯನ್ನು ವಿಸ್ತರಿಸುವಂತೆ ಆಗ್ರಹಿಸಿ ಜಿಲ್ಲೆಯ ಬೀದಿಬದಿ ವ್ಯಾಪಾರಿಗಳು ಪತ್ರ ಚಳವಳಿ ಆರಂಭಿಸಿದ್ದಾರೆ.

ಲಾಕ್​ಡೌನ್ ಕಾರಣದಿಂದ ವ್ಯಾಪಾರ-ವಹಿವಾಟು ಸ್ಥಗಿತಗೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ. ಆತ್ಮ ನಿರ್ಭರ ಭಾರತ ಯೋಜನೆಯಡಿ ನೀಡುತ್ತಿರುವ 2 ಸಾವಿರ ರೂಪಾಯಿ ಹಣ ಎಲ್ಲಿಗೂ ಸಾಲುತ್ತಿಲ್ಲ. ಹಾಗಾಗಿ ಈ ಮೊತ್ತವನ್ನು 10 ಸಾವಿರಕ್ಕೆ ಹೆಚ್ಚಳ ಮಾಡಬೇಕು. ಆತ್ಮ ನಿರ್ಭರ ಭಾರತ ಯೋಜನೆಯಿಂದ ಹಣ ಪಡೆಯಲು ಸಾಲ ತೆಗೆದುಕೊಂಡವರು ಮಾತ್ರ ಅರ್ಹರಾಗಿರುತ್ತಾರೆ. ಇದರಿಂದ ಯೋಜನೆ ಇತರ ಬೀದಿಬದಿ ವ್ಯಾಪಾರಿಗಳಿಗೆ ತಲುಪುತ್ತಿಲ್ಲ. ಆದ್ದರಿಂದ ಸ್ಥಳೀಯ ಸಂಸ್ಥೆಗಳ ಕಾರ್ಡ್ ಹೊಂದಿರುವ ಎಲ್ಲರಿಗೂ ಸಹಾಯಧನ ನೀಡಬೇಕೆಂದು ಬೀದಿಬದಿ ವ್ಯಾಪಾರಿಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆಯುವ ಚಳವಳಿ ಹಮ್ಮಿಕೊಂಡಿದ್ದಾರೆ.

ಬೀದಿಬದಿ ವ್ಯಾಪಾರಿಗಳಿಂದ ಪತ್ರ ಚಳವಳಿ

ಓದಿ : 96 ಕೋಟಿ ರೂ. ವೆಚ್ಚದ ಶಿವಮೊಗ್ಗ ನೀರು ಸರಬರಾಜು ಯೋಜನೆಗೆ ಅನುಮೋದನೆ

ಕಳೆದ ವರ್ಷ ಲಾಕ್​​ಡೌನ್​ ಅವಧಿಯಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ ಆತ್ಮ ನಿರ್ಭರ ಭಾರತ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗ್ತಿದೆ. ಈ ಹಣ ಅನೇಕರಿಗೆ ಸರಿಯಾಗಿ ತಲುಪುತ್ತಿಲ್ಲ. ಒಂದು ವೇಳೆ ಬ್ಯಾಂಕ್ ಖಾತೆಗೆ ಹಣ ಬಂದರೂ ಅದು ಸಾಲದ ಬಾಕಿಗೆ ಕಡಿತಗೊಳ್ಳುತ್ತಿದೆ ಎಂದು ಈಗಾಗಲೇ ಬೀದಿಬದಿ ವ್ಯಾಪಾರಿಗಳಿಂದ ದೂರುಗಳು ಕೇಳಿ ಬಂದಿವೆ.

ABOUT THE AUTHOR

...view details