ಕರ್ನಾಟಕ

karnataka

ಶಿವಮೊಗ್ಗಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ತರುವಲ್ಲಿ ಯಶಸ್ವಿ: ಆರಗ ಜ್ಞಾನೇಂದ್ರ

By

Published : Feb 28, 2023, 7:23 PM IST

Updated : Feb 28, 2023, 7:29 PM IST

ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವು ಆರಂಭವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

rashtriya-raksha-university-started-at-shimoga-araga-gyanendra
ಕರ್ನಾಟಕಕ್ಕೆ ರಾಷ್ಟ್ರೀಯ ವಿಶ್ವವಿದ್ಯಾಲಯ ಮಂಜೂರು, ಶಿವಮೊಗ್ಗಕ್ಕೆ ತರುವಲ್ಲಿ ಯಶಸ್ವಿ: ಆರಗ ಜ್ಞಾನೇಂದ್ರ

ಶಿವಮೊಗ್ಗಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ತರುವಲ್ಲಿ ಯಶಸ್ವಿ: ಆರಗ ಜ್ಞಾನೇಂದ್ರ

ಶಿವಮೊಗ್ಗ:ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವು ಶಿವಮೊಗ್ಗದಲ್ಲಿ ಆರಂಭವಾಗಲಿದೆ. ಕರ್ನಾಟಕದಲ್ಲಿಯೇ ಇದು ಪ್ರಥಮ ವಿಶ್ವವಿದ್ಯಾಲಯವಾಗಿದೆ. ಜಿಲ್ಲೆಗೆ ಹೆಮ್ಮೆ ತರುವ ಸಂಗತಿ ಇದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ದೇಶದ ರಕ್ಷಣಾ ಇಲಾಖೆಗೆ ಸೇರುವವರಿಗೆ ಬೋಧನೆಗಾಗಿ ಕೇಂದ್ರ ರಕ್ಷಣಾ ಇಲಾಖೆಯಡಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವು ಕರ್ನಾಟಕಕ್ಕೆ ಮಂಜೂರಾಗಿದೆ. ವಿವಿಯನ್ನು ಶಿವಮೊಗ್ಗಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇವೆ’’ ಎಂದರು.

ಅಹಮದಾಬಾದ್‌ನ ರಕ್ಷಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕಕ್ಕೆ ರಕ್ಷಾ ವಿವಿ ತರುವ ಬಗ್ಗೆ ಚರ್ಚಿಸಲಾಗಿತ್ತು. ಅದರ ಪರಿಣಾಮ ರಾಜ್ಯಕ್ಕೆ ಈ ವಿಶ್ವವಿದ್ಯಾಲಯ ಮಂಜೂರಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಶಿವಮೊಗ್ಗದಲ್ಲಿ ಕಾರ್ಯಾರಂಭ ಮಾಡಲಿದೆ. ಅದಕ್ಕಾಗಿ ನವುಲೆ ಗ್ರಾಮದಲ್ಲಿ ಸರ್ವೇ ನಂ.112ರಲ್ಲಿ 8 ಎಕರೆ ಭೂಮಿಯನ್ನು ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ. ತಾತ್ಕಾಲಿಕವಾಗಿ ರಾಗಿಗುಡ್ಡದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ವಿವಿ ಆರಂಭವಾಗಲಿದೆ. ಜಿಲ್ಲೆಯ ಯುವಕರಿಗೆ ಹೊಸ ದಿಕ್ಕು ತೋರಿಸುತ್ತದೆ. ಉದ್ಯೋಗ ನೀಡುವಲ್ಲಿ ಸಹಕರಿಸುತ್ತದೆ ಎಂದು ಹೇಳಿದರು.

ಇಡೀ ದೇಶದಲ್ಲೇ ಎರಡನೇ ರಕ್ಷಾ ವಿಶ್ವವಿದ್ಯಾಲಯ ಇದಾಗಿದೆ. ಭದ್ರತಾ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಸುಗಳ ಡಿಪ್ಲೊಮೋ, ಪದವಿ ತರಗತಿಗಳ ಶಿಕ್ಷಣ ನೀಡಲಾಗುವುದು. ಡಿಪ್ಲೊಮೋ ಇನ್ ಪೊಲೀಸ್ ಸೈನ್ಸ್, ಬೇಸಿಕ್ ಕೋರ್ಸ್ ಇನ್ ಕಾರ್ಪೋರೇಟ್ ಸೆಕ್ಯೂರಿಟಿ ಮ್ಯಾನೇಜ್‌ಮೆಂಟ್, ಡಿಪ್ಲೊಮೋ ಇನ್​ ಕ್ರಿಮಿನಲ್ ಇನ್ವೆಸ್ಟಿಗೇಶನ್, ಪಿಜಿ ಡಿಪ್ಲೊಮೋ ಇನ್ ಸೈಬರ್ ಸೆಕ್ಯೂರಿಟಿ ಆಂಡ್ ಸೈಬರ್ ಲಾ. ರೋಡ್ ಟ್ರಾಫಿಕ್ ಸೇಪ್ಟಿ ಮ್ಯಾನೇಜ್‌ಮೆಂಟ್, ದೈಹಿಕ ಸಾಮರ್ಥ್ಯ ನಿರ್ವಹಣೆಯ ಎರಡು ವಾರಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಪಿಜಿ ಡಿಪ್ಲೊಮೋ ಇನ್ ಕೋಸ್ಟಲ್ ಸೆಕ್ಯೂರಿಟಿ ಅಂಡ್ ಎಎಂಪಿ ಲಾ ಎನ್ಫೋರ್ಸ್ಮೆಂಟ್ ಕೋರ್ಸ್​ಗಳನ್ನು ಬೋಧಿಸಲಾಗುವುದು ಎಂದು ತಿಳಿಸಿದರು.

ವೃತ್ತಿ ಭದ್ರತೆಯ ಶಿಕ್ಷಣ:ಈ ಕೋರ್ಸ್​ಗಳಿಂದ ಪೊಲೀಸ್ ಮತ್ತು ರಕ್ಷಣಾ ವಿಭಾಗಗಳಿಗೆ ನೇರವಾಗಿ ಅಭ್ಯರ್ಥಿಗಳು ಆಯ್ಕೆಯಾಗಬಹುದು. ಇದೊಂದು ವೃತ್ತಿ ಭದ್ರತೆಯ ಶಿಕ್ಷಣ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಇದು ವರದಾನವಾಗಲಿದೆ ಎಂದರು.

ರೌಡಿಗಳನ್ನು ಚುನಾವಣಾ ಸಂದರ್ಭದಲ್ಲಿ ಬಳಸಿಕೊಳ್ಳಲು ರೌಡಿ ಪಟ್ಟಿಯಿಂದ ಬಿಡಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ‘‘ಕ್ರಿಮಿನಲ್ ಹಿನ್ನೆಲೆಯುಳ್ಳ ಯಾರನ್ನೂ ರೌಡಿ ಪಟ್ಟಿಯಿಂದ ಕೈಬಿಟ್ಟಿಲ್ಲ. ರಾಜಕೀಯ ಕಾರಣಗಳಿಗಾಗಿ ಅಮಾಯಕರು, ನಿರಪರಾಧಿಗಳನ್ನು ರೌಡಿ ಪಟ್ಟಿಯಿಂದ ಕೈಬಿಡಲಾಗಿದೆ. ಅವರನ್ನು ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಬಳಸಿಕೊಳ್ಳಲು ಇಂತಹ ತೀರ್ಮಾನ ಕೈಗೊಂಡಿದೆ ಎಂಬುದು ಸುಳ್ಳು ಆರೋಪ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕಲು ಅವರನ್ನು ರೌಡಿ ಲಿಸ್ಟ್​ ಸೇರಿಸಿತ್ತು’’ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಗೋಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸಿದರೆ ಜನ ಸುಮ್ಮನಿರಲ್ಲ: ಪ್ರಭು ಚವ್ಹಾಣ್

Last Updated :Feb 28, 2023, 7:29 PM IST

ABOUT THE AUTHOR

...view details