ಕರ್ನಾಟಕ

karnataka

ಶಿವಮೊಗ್ಗ: ಫ್ರೀಡಂ ಪಾರ್ಕ್​ನಲ್ಲಿ ಯುವಕನಿಗೆ ಚಾಕು ಇರಿತ

By ETV Bharat Karnataka Team

Published : Dec 25, 2023, 5:58 PM IST

ಯುವಕನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

young-man-was-stabbed-in-shimoga
ಶಿವಮೊಗ್ಗ: ಫ್ರೀಡಂಪಾರ್ಕ್​ನಲ್ಲಿ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್​ನಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಇಂದು ನಡೆದಿದೆ. ಶಶಿ ಅಲಿಯಾಸ್ ಶಶಿಕುಮಾರ್ ಇರಿತಕ್ಕೊಳಗಾದ ವ್ಯಕ್ತಿ. ಈತ ಆಟೋ ಚಾಲಕನಾಗಿದ್ದು, ಫ್ರೀಡಂ ಪಾರ್ಕ್‌ನಲ್ಲಿದ್ದಾಗ ಮಂಜುನಾಥ್ ಅಲಿಯಾಸ್ ವಲಂಗ ಹಾಗೂ ಆತನ ಸಹಚರರು ಬಂದು ಇರಿದಿದ್ದಾರೆ ಎಂದು ಹೇಳಲಾಗುತ್ತಿದೆ. ಶಶಿ‌ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಳೇ ವೈಷಮ್ಯವೇ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತನ್ನ ಮೇಲೆ ‌ವಲಂಗ ಸೇರಿದಂತೆ ಇತರೆ ಮೂವರು ಹಲ್ಲೆ ಮಾಡಿದ್ದಾರೆ ಎಂದು ಶಶಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ವಿನೋಬನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ (ರಾಮನಗರ): ಮತ್ತೊಂದೆಡೆ, ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಕನಕಪುರ ತಾಲೂಕಿನ ಕಲ್ಕೆರೆ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ದೀಪಕ್ (23) ಸಾವಿಗೀಡಾದ ಯುವಕ. ಮದ್ಯ ಸೇವನೆ ವಿಚಾರಕ್ಕೆ ಗಲಾಟೆ ನಡೆದಿದ್ದು, ನಿನ್ನೆ ತಡರಾತ್ರಿ ಮಲಗಿದ್ದ ದೀಪಕ್​ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ‌ಸ್ಥಳಕ್ಕೆ‌ ಕನಕಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ.

ಇದನ್ನೂ ಓದಿ:ಕಲಬುರಗಿ: ಕಾಂಗ್ರೆಸ್ ಮುಖಂಡನ ಪುತ್ರ ಕೊಲೆ, ಪೊಲೀಸರಿಗೆ ಶರಣಾದ ಆರೋಪಿ

ರೌಡಿಶೀಟರ್​ ಬರ್ಬರ ಹತ್ಯೆ: ಸಾರಿಗೆ ಸಚಿವರ ಮನೆಯ ಸಮೀಪದಲ್ಲೇ ರೌಡಿಶೀಟರ್‌ವೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಭಾನುವಾರ ಸಂಜೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಕಸಂದ್ರ ಬಳಿ ನಡೆದಿತ್ತು. ಜಯಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಹತ್ಯೆಯಾದ ರೌಡಿಶೀಟರ್. ಹನುಮ ಜಯಂತಿ ಹಿನ್ನೆಲೆಯಲ್ಲಿ ಲಕ್ಕಸಂದ್ರ ಬಸ್ ನಿಲ್ದಾಣದ ಸಮೀಪದ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಅನ್ನದಾನ ಕಾರ್ಯಕ್ರಮದಲ್ಲಿ ಜಯಪ್ರಕಾಶ್ ಭಾಗಿಯಾಗಿದ್ದ.

ಈ ಬಗ್ಗೆ ಅರಿತುಕೊಂಡು ಮೊದಲೇ ಹೊಂಚು ಹಾಕಿದ್ದ ನಾಲ್ಕೈದು ಜನರು ಸಂಜೆ 7ರ ಸುಮಾರಿಗೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ತಪ್ಪಿಸಿಕೊಳ್ಳುವ ಯತ್ನದಲ್ಲಿ ಜಯಪ್ರಕಾಶ್ ಸಮೀಪದಲ್ಲಿದ್ದ ವಿಜಯ ಸಾಗರ ಹೋಟೆಲ್‌ಗೆ ನುಗ್ಗಿದ್ದ. ಆದರೂ ಬಿಡದ ಆರೋಪಿಗಳು ಹೋಟೆಲ್‌ನಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದರು.

ABOUT THE AUTHOR

...view details