ಕರ್ನಾಟಕ

karnataka

ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ

By

Published : Oct 20, 2022, 2:12 PM IST

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ, ರಸ್ತೆ ಅಭಿವೃದ್ಧಿ ಕೆಲಸ ತುಂಬಾ ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಹಾಗೂ ರಸ್ತೆಗಳಲ್ಲಿ ಸೂಚನಾ ಫಲಕಗಳಿಲ್ಲದೇ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ
A terrible accident on the highway: two died on the spot

ತುಮಕೂರು: ಗೂಡ್ಸ್ ವಾಹನವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206 ಕೊನೆಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಸಿದ್ದಾಪುರದ ನಿವಾಸಿ ಶಮಂತಾಚಾರ್ (55), ಶಿವಪುರ ಗ್ರಾಮದ ಶಿವಣ್ಣ (50) ಎಂದು ಗುರುತಿಸಲಾಗಿದೆ.

ಶಮಂತಾಚಾರ್ ಮರಗೆಲಸದ ಕಾರ್ಯ ಮಾಡುತ್ತಿದ್ದರು ಮತ್ತು ಶಿವಣ್ಣ ತೆಂಗಿನ ಕಾಯಿ ಕೀಳುವ ಕೆಲಸ ಮಾಡುತ್ತಿದ್ದರು. ಗೂಡ್ಸ್​ ವಾಹನ ಏಕಾಏಕಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅತಿ ವೇಗದ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರ ಆಕ್ರೋಶ:ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ, ರಸ್ತೆ ಅಭಿವೃದ್ಧಿ ಕೆಲಸ ತುಂಬಾ ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಹಾಗೂ ರಸ್ತೆಗಳಲ್ಲಿ ಸೂಚನಾ ಫಲಕಗಳಿಲ್ಲದೇ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ತಿಪಟೂರಿನಿಂದ ಅರಸೀಕೆರೆ ಮಧ್ಯೆ ಸುಮಾರು 10ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ.

ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ.. ಸ್ಕೂಟರ್​ಗೆ ಬಸ್​ ಡಿಕ್ಕಿ- ತಾಯಿ ಮಗಳಿಗೆ ಗಾಯ

ABOUT THE AUTHOR

...view details