ಕರ್ನಾಟಕ

karnataka

60 ವರ್ಷ ಮೇಲ್ಪಟ್ಟವರಿಗೆ ಉಚಿತ ನೇತ್ರ ಚಿಕಿತ್ಸೆ: ಸಿಎಂ ಬೊಮ್ಮಾಯಿ

By

Published : Dec 7, 2022, 2:26 PM IST

CM Basavaraj Bommai inaugurated Narayana Eye Clinic

ತುಮಕೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾರಾಯಣ ನೇತ್ರ ಚಿಕಿತ್ಸಾ ಕೇಂದ್ರ ಉದ್ಘಾಟನೆ ಮಾಡಿದರು.

ತುಮಕೂರು: 60 ವರ್ಷ ಮೇಲ್ಪಟ್ಟವರಿಗೆ ಸಂಪೂರ್ಣ ಉಚಿತವಾಗಿ ನೇತ್ರ ತಪಾಸಣೆ ಮಾಡಿ ಚಿಕಿತ್ಸೆ ನೀಡಿ, ಕನ್ನಡಕ ನೀಡುವ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ನಾರಾಯಣ ನೇತ್ರ ಚಿಕಿತ್ಸಾ ಕೇಂದ್ರ ಉದ್ಘಾಟಿಸಿದ ನಂತರ ಅವರು ಮಾತನಾಡಿದರು. ಆಸ್ಪತ್ರೆಗೆ ಬರುವ ಜನರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಆಸ್ಪತ್ರೆ ಮಾಲೀಕರು ಯೋಜನೆ ರೂಪಿಸಬೇಕು. ಬಡವರು ಒಳ್ಳೆಯ ಚಿಕಿತ್ಸೆ ಪಡೆಯಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದ‌ನ್ನು ಎಲ್ಲರೂ ಗಂಭೀರವಾಗಿ ತೆಗೆದುಕೊಳ್ಳಬೇಕು. ಆರ್ಥಿಕ ಸ್ಥಿತಿಯ ಕಾರಣದಿಂದಾಗಿ ಎಷ್ಟೋ ಜನ ಚಿಕಿತ್ಸೆ ಪಡೆಯಲು ಆಗದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಎಲ್ಲರೂ ಚಿಂತನೆ ನಡೆಸಬೇಕಿದೆ ಎಂದರು.

ಕಣ್ಣಿನ ತೊಂದರೆ, ಆಪತ್ತು ನಿವಾರಣೆ ಮಾಡುವಂತಹ ತಂತ್ರಜ್ಞಾನ ಬೆಳೆದಿದೆ. ನಾರಾಯಣ ನೇತ್ರಾಲಯದ ಕೆ.ಭುಜಗಂಶೆಟ್ಟಿ ಅವರು ದೊಡ್ಡ ಪ್ರಮಾಣದಲ್ಲಿ ಸೇವೆ ಮಾಡುತ್ತಿದ್ದಾರೆ. ಕಣ್ಣಿನ ದಾನ ಮಾಡಲು ಅಭಿಯಾನ ಮಾಡಿದ್ದರು ಎಂದರು. ನಾರಾಯಣ ನೇತ್ರಾಲಯದಲ್ಲಿ ಸಂಪೂರ್ಣವಾಗಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರದಿಂದ ಅನುಷ್ಠಾನಕ್ಕೆ ತರುವ ಯೋಜ‌ನೆಗೂ ಕೆ.ಭುಜಂಗಶೆಟ್ಟಿ ನೇತೃತ್ವ ವಹಿಸಿಕೊಳ್ಳಬೇಕು ಎಂದು ಕೋರಿದರು.

ನಾರಾಯಣ ನೇತ್ರ ಚಿಕಿತ್ಸಾ ಕೇಂದ್ರ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ನಾರಾಯಣ ನೇತ್ರಾಲಯದಂತಹ ಆಸ್ಪತ್ರೆ ರಾಜ್ಯದಲ್ಲಿ ಎಲ್ಲೂ ಇಲ್ಲ ಎಂಬುದು ನನ್ನ ಅಭಿಪ್ರಾಯ. ಎಲ್ಲ ಸೌಲಭ್ಯಗಳನ್ನು ಒಳಗೊಂಡ ಆಸ್ಪತ್ರೆಯಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಎಲ್ಲ ಯಶಸ್ವಿ ವೈದ್ಯರು ಇದನ್ನು ಅನುಸರಿಸಬೇಕು ಎಂದರು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ನಾರಾಯಣ ನೇತ್ರಾಲಯದ ಡಾ.ಕೆ.ಭುಜಂಗ ಶೆಟ್ಟಿ, ಸಚಿವರಾದ ಬಿ.ಸಿ.ನಾಗೇಶ್, ಗೋಂವಿದ ಕಾರಜೋಳ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ರಾಜೇಶ್ ಗೌಡ ಉಪಸ್ಥಿತರಿದ್ದರು.

ಇದನ್ನೂ ಓದಿ:ಆನೇಕಲ್ ಕಂದಾಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಲೋಕಾಯುಕ್ತರು

ABOUT THE AUTHOR

...view details