ಕರ್ನಾಟಕ

karnataka

ಉಡುಪಿ: ಸ್ಯಾಂಟ್ರೋ ರವಿ ಬಂಧನ ಖಚಿತಪಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

By

Published : Jan 13, 2023, 6:13 PM IST

Updated : Jan 13, 2023, 6:29 PM IST

ವಂಚಕ ಸ್ಯಾಂಟ್ರೋ ರವಿ ಬಂಧನ ಗೃಹ ಸಚಿವ ಆರಗ ಜ್ಞಾನೇಂದ್ರ ಖಚಿತಪಡಿಸಿದ್ದಾರೆ. ಯುವತಿಯೊಬ್ಬರಿಗೆ ಕೆಲಸ ನೀಡುವ ಭರವಸೆ ನೀಡಿ ಅವರನ್ನು ಬಲವಂತವಾಗಿ ವಿವಾಹವಾಗಿ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೆ ಎಸ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆತನ ಬಂಧನಕ್ಕಾಗಿ ಹಲವು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಸದ್ಯ ಗುಜರಾತ್​ನಲ್ಲಿ ಆತನ ಬಂಧನವಾಗಿದೆ.

Araga Jnanendra React On Santro Ravi Arrest
Araga Jnanendra React On Santro Ravi Arrest

ಗೃಹ ಸಚಿವ ಆರಗ ಜ್ಞಾನೇಂದ್ರ

ಉಡುಪಿ: ಸ್ಯಾಂಟ್ರೋ ರವಿ ಬಂಧನವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಖಚಿತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿಯ ಬಂಧನವಾಗಿದೆ. 11 ದಿನಗಳ ನಂತರ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ನಾಲ್ಕೈದು ಟೀಮ್ ನಡೆಸಿ ಮೈಸೂರು ರಾಮನಗರ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದರು. ಪೊಲೀಸರ ವಿಶೇಷ ಪ್ರಯತ್ನದಿಂದ ಸ್ಯಾಂಟ್ರೋ ರವಿ ಬಂಧನವಾಗಿದೆ. ಗುಜರಾತ್ ರಾಜ್ಯದಲ್ಲಿ ಬಂಧನವಾಗಿದ್ದು ಎಲ್ಲಾ ಪ್ರೊಸೀಜರ್ ಮುಗಿಸಿಕೊಂಡು ಆತನನ್ನು ಬೆಂಗಳೂರಿಗೆ ಕರೆತರಲಾಗುವುದು ಎಂದಿದ್ದಾರೆ.

ಸರ್ಕಾರದ ಮೇಲೆ ಎಲ್ಲ ರೀತಿಯ ಟೀಕೆಗಳು ಇತ್ತು. ಒತ್ತಡ ಇದೆ. ಹಾಗಾಗಿ, ಅವರನನ್ನು ಬಂಧಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಅಂತೆಲ್ಲ ಪ್ರತಿಕಕ್ಷದವರು ಆರೋಪ ಮಾಡುತ್ತಿದ್ದರು. ಸರ್ಕಾರದ ಮೇಲೆ ಯಾವ ಒತ್ತಡವು ಇರಲಿಲ್ಲ. ನಾವು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆವು. ಎಲ್ಲೇ ಇದ್ದರೂ, ಹೇಗೆ ಇದ್ದರೂ ಕರೆತಂದು ವಿಚಾರಿಸಬೇಕೆಂದು ಹೇಳಿದ್ದೆವು. ಆತ ನಡೆಸಿದ ಕೃತ್ಯಕ್ಕೆ ಸರಿಯಾದ ಶಿಕ್ಷೆಯಾಗಬೇಕು. ಗುಜರಾತ್​​ನಲ್ಲಿ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸುತ್ತಾರೆ. ನಂತರ ಆತನನ್ನು ಕರೆತರುವುದಾಗಿ ಅವರು ಹೇಳಿದರು.

ಎರಡು ಮೂರು ಕಡೆ ಅಂತಿಮ ಕ್ಷಣದಲ್ಲಿ ತಪ್ಪಿಸಿಕೊಂಡಿದ್ದ ಆತನನ್ನು ವಿಶೇಷ ಪ್ರಯತ್ನದಿಂದ ಪೊಲೀರು ಬಂಧಿಸಿದ್ದಾರೆ. ಇಂದು ಸಂಜೆ ಅಥವಾ ನಾಳೆ ಆತನನ್ನು ಬೆಂಗಳೂರಿಗೆ ಕರೆದಿರುವ ಸಾಧ್ಯತೆ ಇದೆ. ಎಲ್ಲ ಆಯಮದಲ್ಲೂ ತನಿಖೆ ನಡೆಯುತ್ತದೆ. ಏನೇ ಇದ್ದರೂ ಅಡಗಿಸಿರುವುದಿಲ್ಲ. ಅತ್ಯಂತ ಪಾರದರ್ಶಕವಾಗಿ ತನಿಖೆ ನಡೆಯುತ್ತದೆ. ಆತ ನಡೆಸಿದ ಎಲ್ಲ ಕೃತ್ಯಕ್ಕೆ ಶಿಕ್ಷೆಯಾಗುತ್ತೆ.

ಯಾವುದೇ ಅಧಿಕಾರಿ ಅಥವಾ ರಾಜಕಾರಣಿ ಇದ್ದರೂ ಕೂಡ ತನಿಕೆಯಿಂದ ಹೊರಗೆಳೆಯುತ್ತೇವೆ. ಆತನ ಜೊತೆಗೆ ಇರುವವರನ್ನು ಕೂಡ ಬಂಧಿಸಲಾಗುವುದು. ಸದ್ಯ ರವಿ ಬಂಧನವಾಗಿದೆ. ಹೆಚ್ಚಿನ ವಿವರಣೆ ನೀಡಲು ಹೋಗುವುದಿಲ್ಲ. ಪೊಲೀಸರು ಈ ಬಗ್ಗೆ ವಿವರ ನೀಡುತ್ತಾರೆ. ನಿನ್ನೆ ನಾನು ಕೂಡ ಅಹಮದಾಬಾದ್​​ನಲ್ಲಿ ಇದ್ದದ್ದು ಕಾಕತಾಳಿಯವಷ್ಟೇ ಅಂತಾ ಗ್ರಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಎಡಿಜಿಪಿಯಿಂದ ಸುದ್ದಿಗೋಷ್ಠಿ ನಡೆಸಿ ವಿವರಣೆ:ಇತ್ತ ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಸಂಜೆ ಕರೆಯಲಾಗಿದ್ದ ಮಹತ್ವದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ರಾಯ್ಯ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಅಲೋಕ್ ಕುಮಾರ್ (ಎಡಿಜಿಪಿ) ಸುದ್ದಿಗೋಷ್ಠಿ ನಡೆಸಿ ಆತನ ಬಂಧನವನ್ನು ಖಚಿತಪಡಿಸಿದ್ದಾರೆ.

ಗುಜರಾತ್​ನ ಅಹಮದಾಬಾದ್​​ನಲ್ಲಿ ಸ್ಯಾಂಟ್ರೋ ರವಿಯ ದಸ್ತಗಿರಿಯಾಗಿದೆ. ಗುಜರಾತ್ ಪೊಲೀಸರ ನೆರವಿನಿಂದ ಕರ್ನಾಟಕದ ಪೊಲೀಸರ ತಂಡ ಸ್ಯಾಂಟ್ರೋ ರವಿಯನ್ನು ದಸ್ತಗಿರಿ ಮಾಡಿದೆ. ಸ್ಯಾಂಟ್ರೋ ರವಿ ಬಂಧನಕ್ಕಾಗಿ ಪೊಲೀಸರ ಹಲವು ತಂಡಗಳನ್ನು ರಚಿಸಲಾಗಿತ್ತು. ದೇಶದ ಹಲವು ರಾಜ್ಯಗಳಲ್ಲಿ ಸಂಚರಿಸುತ್ತಿದ್ದ ಆತನನನ್ನು ನಮ್ಮ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಟ್ರೋ ರವಿ ವಿಶೇಷ ತಂಡ ರಚಿಸಿ ಬಂಧಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವರು ಸೇರಿದಂತೆ ಹಲವರು ಒತ್ತಾಯ ಮಾಡಿದ್ದರು.

ಆತ ನಿತ್ಯ ಜಾಗ ಬದಲಾಯಿಸುವ ಜೊತೆಗೆ, ಕಾರು, ಸಿಮ್ ಕಾರ್ಡ್ ಬದಲಾಯಿಸುತ್ತಿದ್ದುದರಿಂದ ಆತನನ್ನು ಬಂಧಿಸಲು ಇಷ್ಟು ದಿನಗಳಾಯಿತು‌. ಒಟ್ಟಾರೆಯಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರ ನೆರವಿನಿಂದ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ಸ್ಯಾಂಟ್ರೋ ರವಿ ಬಂಧಿಸಿರುವುದಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಸಹ ಘೋಷಿಸಲಾಗಿದೆ. ಸ್ಯಾಂಟ್ರೋ ರವಿ ಜೊತೆಗೆ ಕರ್ನಾಟಕದ ಸತೀಶ್ ಮತ್ತು ಗುಜರಾತ್​ನ ರಾಮ್ ಜೀ ಎಂಬುವರನ್ನು ಕೂಡ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಯುವತಿಯೊಬ್ಬರಿಗೆ ಕೆಲಸ ನೀಡುವ ಭರವಸೆ ನೀಡಿ ಅವರನ್ನು ಬಲವಂತವಾಗಿ ವಿವಾಹವಾಗಿ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೆ ಎಸ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಸ್ವತಃ ಸಂತ್ರಸ್ತೆಯೇ ಆತನ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ನಂತರ ರಾಜ್ಯ ರಾಜಕಾರಣದಲ್ಲಿ ಕೆ ಎಸ್ ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಬಾರಿ ಸದ್ದು ಮಾಡಿತ್ತು. ದೂರು ದಾಖಲಿ ಹತ್ತುದಿನವಾದರೂ ಆತ ಸಿಕ್ಕಿರಲಿಲ್ಲ. ಕೊನೆಗೂ ಪೊಲೀಸ್​ ಬಲೆಗೆ ಸ್ಯಾಂಟ್ರೋ ರವಿ ಬಿದ್ದಿದ್ದಾನೆ. ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ದೂರದ ಗುಜರಾತ್​ನಲ್ಲಿ ಕರ್ನಾಟಕ ಪೊಲೀಸರ ಸೆರೆಯಾಗಿದ್ದಾನೆ. ಈ ವಿಷಯವನ್ನು ಎಡಿಜಿಪಿ ಅಲೋಕ್​ ಕುಮಾರ್​ ದೃಢಪಡಿಸಿದ್ದಾರೆ.

ಇದನ್ನೂ ಓದಿ:Santro Ravi arrest: ಗುಜರಾತ್​ನಲ್ಲಿ ಸ್ಯಾಂಟ್ರೋ ರವಿ ಬಂಧನ: ಎಡಿಜಿಪಿ ಅಲೋಕ್​ ಕುಮಾರ್​

Last Updated : Jan 13, 2023, 6:29 PM IST

ABOUT THE AUTHOR

...view details