ಕರ್ನಾಟಕ

karnataka

ದೇವಸ್ಥಾನ, ಮಸೀದಿ, ಚರ್ಚುಗಳ ರಕ್ಷಣೆ ನಮ್ಮ ಜವಾಬ್ದಾರಿ: ಸಚಿವೆ ಶೋಭಾ ಕರಂದ್ಲಾಜೆ

By

Published : Sep 18, 2021, 7:12 AM IST

Shobha Karandlaje

ದೇವಸ್ಥಾನ, ಮಸೀದಿ, ಚರ್ಚುಗಳು ನಮ್ಮ ಶ್ರದ್ಧಾ ಕೇಂದ್ರಗಳು. ಇವುಗಳ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಹೇಳಿದರು.

ಉಡುಪಿ: ಪ್ರಧಾನಿ‌ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನೆಲೆ ಶುಕ್ರವಾರಉಡುಪಿಯ ಕೊರಗ ಸಮುದಾಯದ ಮನೆಗಳಿಗೆ ತೆರಳಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಹಾರ ಪದಾರ್ಥಗಳ ಕಿಟ್ ವಿತರಿಸಿದರು.

ನಂತರ ಮಾತನಾಡಿದ ಅವರು‌, ಮೋದಿ 71ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ದೇಶದ ಬಡ ಜನರ ಸೇವೆ ಅವರಿಗೆ ಪ್ರಿಯವಾದದ್ದು, ಸೇವಾ ಚಟುವಟಿಕೆ ನಡೆಸಿದರೆ ಅವರಿಗೆ ಮುದ ಕೊಡುತ್ತದೆ. ಬೇರೆ-ಬೇರೆ ರೀತಿಯ ಸೇವಾ ಚಟುವಟಿಕೆಯಲ್ಲಿ ಬಿಜೆಪಿ ತೊಡಗಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ರಕ್ಷಣೆ ಮತ್ತು ಗೌರವ ಹೆಚ್ಚಿಸಲು ಶಕ್ತಿ ನೀಡಲಿ ಎಂದು ಶ್ರೀಕೃಷ್ಣ- ಚಾಮುಂಡೇಶ್ವರಿ ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ರು.

ಉಡುಪಿಯಲ್ಲಿ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು ದೇವಸ್ಥಾನ ತೆರವು ವಿಚಾರವಾಗಿ ಮಾತನಾಡಿದ ಅವರು, ದೇವಸ್ಥಾನ, ಮಸೀದಿ, ಚರ್ಚ್​ಗಳು ನಮ್ಮ ಶ್ರದ್ಧಾ ಕೇಂದ್ರಗಳು. ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಜವಾಬ್ದಾರಿ. ಅಕ್ರಮ ಸ್ಥಳದಲ್ಲಿ ಶ್ರದ್ಧಾ ಕೇಂದ್ರಗಳಿದ್ದರೆ ಪೂರ್ವಭಾವಿಯಾಗಿ ಸೂಚನೆ ನೀಡಬೇಕು. ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡುವ ಬಗ್ಗೆ ಸರ್ಕಾರ ಯೋಚಿಸಬೇಕು. ಶ್ರದ್ಧಾ ಕೇಂದ್ರಗಳ ಬಗ್ಗೆ ಜನರ ನಂಬಿಕೆ, ಭಕ್ತಿ ಭಾವ ಪ್ರೀತಿ ಸಹಜವಾಗಿ ಹೆಚ್ಚಿರುತ್ತದೆ. ಭಾವನೆಗೆ ನೋವುಂಟಾದಲ್ಲಿ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗುವುದಿಲ್ಲ. ಅಕ್ರಮ ದೇವಾಲಯ ಕಂಡು ಬಂದರೆ ಊರಿನ ಜನರ ಮನವೊಲಿಸಿ ಮುಂದಿನ ಕ್ರಮ ಕೈಗೊಳ್ಳಿ, ಇದು ರಾಜ್ಯ ಸರ್ಕಾರಕ್ಕೆ ನನ್ನ ಮನವಿ ಎಂದು ಹೇಳಿದರು.

ಕರಾವಳಿ ಜಿಲ್ಲೆಗಳಲ್ಲಿ ಮಿಷನರಿಗಳಿಂದ ಮತಾಂತರ ಪ್ರಕರಣಗಳು ವರದಿಯಾಗುತ್ತಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವೆ ಕರಂದ್ಲಾಜೆ, ಕರಾವಳಿ ಮಾತ್ರವಲ್ಲದೆ, ದೇಶಾದ್ಯಂತ ಕ್ರಿಶ್ಚಿಯನ್ ಮಿಷನರಿಗಳಿಂದ ಮತಾಂತರ ನಡೆಯುತ್ತಿದೆ. ಮತಾಂತರ ಕುರಿತ ಕಾನೂನು ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗಬೇಕು. ಮತಾಂತರ ತಡೆಯಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದರು.

ABOUT THE AUTHOR

...view details