ಕರ್ನಾಟಕ

karnataka

ಬೆಣಂದೂರು ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

By

Published : Aug 28, 2020, 7:47 AM IST

3 ದಿನಗಳ ಹಿಂದಷ್ಟೇ 8 ಆರೋಪಿಗಳನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಪತ್ತೆ ಕಾರ್ಯ ನಡೆಸಿದ್ದರು.

ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಭಟ್ಕಳ: ಬೆಣಂದೂರು ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

3 ದಿನಗಳ ಹಿಂದಷ್ಟೇ 8 ಆರೋಪಿಗಳನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಪತ್ತೆ ಕಾರ್ಯ ನಡೆಸಿದ್ದರು. ನೂಜ್ ಗ್ರಾಮ ವ್ಯಾಪ್ತಿಯ ಕಾಡಿನಲ್ಲಿ ತಲೆಮರೆಸಿಕೊಂಡಿದ್ದ ಮತ್ತೆ ಮೂರು ಜನ ಆರೋಪಿಗಳನ್ನು ಗುರುವಾರ ದಸ್ತಗಿರಿ ಮಾಡಿ ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details