ಕರ್ನಾಟಕ

karnataka

ಜಾಗ ಖಾಲಿ ಮಾಡುವಂತೆ ಅತಿಕ್ರಮಣದಾರರಿಗೆ ಕಿರುಕುಳ ನೀಡುತ್ತಿರುವ ಅರಣ್ಯ ಸಿಬ್ಬಂದಿ

By

Published : Oct 15, 2019, 8:48 PM IST

ಕಿರುಕುಳ ನೀಡುತ್ತಿರುವ ಅರಣ್ಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅತಿಕ್ರಮಣದಾರರು ಪ್ರತಿಭಟನೆ ನಡೆಸಿದರು.

forest-staff-harassing-to-people

ಭಟ್ಕಳ:ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿರುವ ತಾಲೂಕಿನ ಅರಣ್ಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಅತಿಕ್ರಮಣದಾರರು ಪಿಎಸ್​​ಐ ಹನುಮಂತಪ್ಪ ಕುಡಗುಂಟಿ ಅವರಿಗೆ ಇಂದು ಮನವಿ ಸಲ್ಲಿಸಿದ್ದಾರೆ.

ಮನವಿ ಸಲ್ಲಿಸುವುದಕ್ಕೂ ಮುನ್ನ ನಗರ ಠಾಣೆ ಪೊಲೀಸ್ ಎದುರು ಪ್ರತಿಭಟನೆ ನಡೆಸಿದ ಅರಣ್ಯ ಅತಿಕ್ರಮಣದಾರರು, ನಮಗೆ ರಕ್ಷಣೆ ಕೊಟ್ಟು ನ್ಯಾಯ ಒದಗಿಸಿ ಎಂದು ಒತ್ತಾಯಿಸಿದರು.

ಪ್ರತಿಭಟನೆ ನಡೆಸಿದ ಅತಿಕ್ರಮಣದಾರರು.

ಅರಣ್ಯ ಅತಿಕ್ರಮಣದಾರರು ವಾಸ್ತವ್ಯ ಹಾಗೂ ಸಾಗುವಳಿಗಾಗಿ ಅರಣ್ಯ ಭೂಮಿ ಅವಲಂಬಿಸಿದ್ದಾರೆ. ಅರಣ್ಯ ಸಿಬ್ಬಂದಿ ಅತಿಕ್ರಮಣ ಸ್ವಾಧೀನದಲ್ಲಿರುವ ಕುಟುಂಬಗಳಿಗೆ ಏಕಾಏಕಿ ಪ್ರವೇಶಿಸಿ ವಾಸವಿದ್ದವರಿಗೆ ತೊಂದರೆ ಕೊಟ್ಟಿದ್ದಾರೆ. ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕಾನೂನಾತ್ಮಕ ಬೆಂಬಲ ಇಲ್ಲದಿದ್ದರೂ ಅತಿಕ್ರಮಣದಾರರನ್ನು ನಮ್ಮನ್ನು ಅಲ್ಲಿಂದ ಓಡಿಸಲು ಮುಂದಾಗಿದ್ದಾರೆ.

ಅರಣ್ಯ ಸಿಬ್ಬಂದಿ ದುರ್ನಡತೆ ಕುರಿತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿ ಗಮನಕ್ಕೆ ತಂದರೂ ಕ್ರಮ ಜರುಗಿಸಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details