ಕರ್ನಾಟಕ

karnataka

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಶಿರಸಿಯಲ್ಲಿ ಯುವಕನ ಬಂಧನ

By

Published : Sep 26, 2022, 10:13 AM IST

kn_srs_

ಅಪ್ರಾಪ್ತ ಬಾಲಿಕಿಯನ್ನು ಹೋಟೆಲ್​ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿರಸಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ರಾಜೀವ್​ ನಗರದ ಶಕೀಲ್ ಅಹಮ್ಮದ ಅನ್ವರ ಸಾಬ್ ಶೇಖ್ ಬಂಧಿತ ಆರೋಪಿ.

ಚಿಕನ್ ವ್ಯಾಪಾರ ಮಾಡುತ್ತಿದ್ದ ಶಕೀಲ್ ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅವಳನ್ನು ಒತ್ತಾಯದಿಂದ ಹೋಟೆಲ್‌ಗೆ ಕರೆದುಕೊಂಡು ಹೋಗಿ ಅಲ್ಲಿಯ ಕೋಣೆಯಲ್ಲಿ ಪ್ರೀತಿ ಮಾಡುತ್ತೇನೆ ಎಂದು ಹೇಳಿ ಕೆನ್ನೆಗೆ ಮುತ್ತು ಕೊಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದಾನಂತೆ. ಈ ಕುರಿತು ಬಾಲಕಿಯ ತಂದೆ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರು.

ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು, ಪಿಎಸ್‌ಐ ಭೀಮಾಶಂಕರ ಸಿನ್ನೂರು ಸಂಗಣ್ಣ ನೇತೃತ್ವದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

ಇದನ್ನೂ ಓದಿ:ಕಾರವಾರ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ

ABOUT THE AUTHOR

...view details