ಕರ್ನಾಟಕ

karnataka

ವಿಜಯಪುರದಲ್ಲಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸಾವು

By

Published : Jul 19, 2020, 10:11 PM IST

ವೇಗವಾಗಿ ಸಂಚರಿಸುತ್ತಿದ್ದ ಲಾರಿ ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಲಾರಿ ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ..

ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸಾವು
ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸಾವು

ವಿಜಯಪುರ: ಲಾರಿ-ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಓವರ್‌ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸಾವೀಗಿಡಾಗಿದ್ದಾನೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರು ಕ್ರಾಸ್ ಬಳಿ ರಾತ್ರಿ ಈ ಘಟನೆ ನಡೆದಿದೆ. ವೇಗವಾಗಿ ಸಂಚರಿಸುತ್ತಿದ್ದ ಲಾರಿ ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಲಾರಿ ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಬಾಗಲಕೋಟೆ ಜಿಲ್ಲೆಯ‌ ಹುನಗುಂದ ಮೂಲದ ಬೈಕ್ ಸವಾರ ಸಾವಿಗೀಡಾಗಿದ್ದಾನೆ. ಆತನ ಹೆಸರು ತಿಳಿದು ಬಂದಿಲ್ಲ. ಈ ಕುರಿತು ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details