ಕರ್ನಾಟಕ

karnataka

ವಿಜಯಪುರದಲ್ಲಿ ಡೋಣಿ ನದಿ ಪ್ರವಾಹ: ಆಂಜನೇಯ ಸ್ವಾಮಿ ದೇಗುಲ ಜಲಾವೃತ

By

Published : Aug 7, 2022, 12:00 PM IST

ವಿಜಯಪುರದಲ್ಲಿ ಡೋಣಿ ನದಿ ಪ್ರವಾಹ ಮುಂದುವರೆದೆ. ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಜಲ ದಿಗ್ಬಂಧನ ಹಾಕಿದೆ.

Doni River Flood
ಆಂಜನೇಯ ಸ್ವಾಮಿ ದೇವಸ್ಥಾನ ಜಲಾವೃತ

ವಿಜಯಪುರ: ಜಿಲ್ಲೆಯಲ್ಲಿ ಹರಿಯುವ ಡೋಣಿ ನದಿ ಪ್ರವಾಹಕ್ಕೆ ತಾಳಿಕೋಟೆ ಬಳಿಯ ಹಳೆಯ ಸೇತುವೆ ಮುಳುಗಿದೆ. ಸೇತುವೆ ಮೇಲೆ 7 ರಿಂದ 8 ಅಡಿಯಷ್ಟು ನೀರು ಹರಿಯುತ್ತಿದೆ. ರಾಜ್ಯ ಹೆದ್ದಾರಿ 61 ರಲ್ಲಿ ಸಂಚಾರ ಬಂದ್ ಆಗಿದೆ. ಜನರು 50 ಕ್ಕೂ ಹೆಚ್ಚು ಕಿಲೋ ಮೀಟರ್ ಸುತ್ತು ಹಾಕಿ ಸಂಚರಿಸುವ ಅನಿವಾರ್ಯತೆ ಉಂಟಾಗಿದೆ.

ಆಂಜನೇಯ ಸ್ವಾಮಿ ದೇವಸ್ಥಾನ ಜಲಾವೃತ

ಡೋಣಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ತಾಳಿಕೋಟೆ ಪಟ್ಟಣದ ಹೊರಭಾಗದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ನೀರು ಸುತ್ತವರೆದಿದೆ. ದೇಗುಲದ ಅರ್ಧ ಭಾಗದವರೆಗೂ ಪ್ರವಾಹದ ನೀರು ಆವರಿಸಿಕೊಂಡಿದೆ. ಇನ್ನೊಂದೆಡೆ, ಹೊಸ ಸೇತುವೆಯೂ ಬಿರುಕು ಬಿಟ್ಟು ವಾಲಿದ್ದು ವಾಹನ ಸಂಚಾರ ನಿಷೇಧಿಸಲಾಗಿದೆ. ಆದ್ರೂ ಕೆಲ ಬೈಕ್ ಸವಾರರು ಅಪಾಯ ಲೆಕ್ಕಿಸದೇ ಓಡಾಡುತ್ತಿದ್ದಾರೆ.

ಇದನ್ನೂ ಓದಿ:ಡೋಣಿ ನದಿಯಲ್ಲಿ ಮತ್ತೆ ಪ್ರವಾಹ: ಬೆಳೆ ಕಳೆದುಕೊಂಡು ಸಂಕಷ್ಟಕ್ಕೀಡಾದ ಅನ್ನದಾತ

ABOUT THE AUTHOR

...view details