ಕರ್ನಾಟಕ

karnataka

ಹೃದಯಾಘಾತದಿಂದ ಡಾ.ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

By

Published : Aug 24, 2020, 4:31 PM IST

ವಿಜಯಪುರ ಜಿಲ್ಲೆಯ ಇಂಚಗೇರಿ ಕರಿ ಬಸವೇಶ್ವರ ಹಿರಿಯ ಮಠಾಧೀಶರಾದ ಡಾ. ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

Renuka Shivayogi Shivacharya Swamiji
Renuka Shivayogi Shivacharya Swamiji

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ಗ್ರಾಮದ ಡಾ. ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ಶಿವಾಚಾರ್ಯ ಸ್ವಾಮೀಜಿ (65) ಅವರು ಸಕ್ಕರೆ ಕಾಯಿಲೆ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು ತೀವ್ರ ಅಸ್ವಸ್ಥರಾದ ಹಿನ್ನೆಲೆ ವಿಜಯಪುರ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಹೃದಯಾಘಾತದಿಂದ ಶ್ರೀಗಳು ಲಿಂಗೈಕ್ಯರಾಗಿದ್ದಾರೆ.

ಇನ್ನು ಶ್ರೀಗಳ ಪಾರ್ಥಿವ ಶರೀರವನ್ನು ಮರಳಿ ಮಠಕ್ಕೆ ತರಲಾಗಿದ್ದು, ಅಂತ್ಯಕ್ರಿಯೆ ಸಮಯದ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಭಕ್ತರು ತಿಳಿಸಿದ್ದಾರೆ.

ABOUT THE AUTHOR

...view details