ಕರ್ನಾಟಕ

karnataka

ಸರ್ಕಾರಿ ಶಾಲೆಯ ಛಾವಣಿ ಕುಸಿತ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

By

Published : Mar 25, 2022, 5:06 PM IST

ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮದಲ್ಲಿ ಶುಕ್ರವಾರ ಸರ್ಕಾರಿ ಶಾಲೆಯ ಛಾವಣಿ ಕುಸಿದು ಬಿದ್ದಿದೆ.

Government school roof collapses
ವಿಜಯಪುರದಲ್ಲಿ ಸರ್ಕಾರಿ ಶಾಲೆಯ ಛಾವಣಿ ಕುಸಿತ

ಮುದ್ದೇಬಿಹಾಳ (ವಿಜಯಪುರ): ಸರ್ಕಾರಿ ಶಾಲೆಯ ಛಾವಣಿ ಕುಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಘಟನೆ ತಾಲೂಕಿನ ಗೆದ್ದಲಮರಿ ಗ್ರಾಮದಲ್ಲಿ ಶುಕ್ರವಾರ ನಡೆಯಿತು. ಎರಡನೇ ಮತ್ತು ಒಂದನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.


ವಿದ್ಯಾರ್ಥಿಗಳ ತಲೆ ಮೇಲೆ ಛಾವಣಿ ಬಿದ್ದಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಂ.ಜೋಗಿನ್ ಪಾಲಕರಿಗೆ ವಿಷಯ ತಿಳಿಸಿ, ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆ ತಂದಿದ್ದಾರೆ.

ಇದನ್ನೂ ಓದಿ:ರಸ್ತೆಯಲ್ಲೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ : ನಾಲ್ಕು ವರ್ಷದ ಮಗು ಅನಾಥ !

ಪಾಲಕರ ಆಕ್ರೋಶ: ಹಳೆಯದಾದ ಶಾಲೆಯ ಛಾವಣಿಯಿರುವ ಕೊಠಡಿಯಲ್ಲಿ ಮಕ್ಕಳನ್ನು ಕೂರಿಸಿರುವುದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಮಕ್ಕಳಿಗೆ ಹೆಚ್ಚು ಕಮ್ಮಿ ಆಗಿದ್ರೆ, ಹೊಣೆ ಯಾರು ಎಂದು ಪ್ರಶ್ನಿಸಿದ್ದಾರೆ. ಆಸ್ಪತ್ರೆಗೆ ಬಿಇಓ ಎಚ್.ಜಿ.ಮಿರ್ಜಿ, ಶಿಕ್ಷಕರ ಸಂಘದ ಪದಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

TAGGED:

ABOUT THE AUTHOR

...view details