ಕರ್ನಾಟಕ

karnataka

ವಿಜಯಪುರ: ಚಿಕಿತ್ಸೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ ಅಪಘಾತ; ಶಿಶು ಸಹಿತ ಗರ್ಭಿಣಿ ಸಾವು

By ETV Bharat Karnataka Team

Published : Dec 9, 2023, 6:59 PM IST

ಆಂಬ್ಯುಲೆನ್ಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಶಿಶು ಸಹಿತ ಗರ್ಭಿಣಿ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

Etv Bharatpregnant-woman-dies-with-baby-in-road-accident
ಚಿಕಿತ್ಸೆಗೆ ಕರೆದೂಯ್ಯುವಾಗ ಆಂಬ್ಯುಲೆನ್ಸ್ ಅಪಘಾತ.. ಶಿಶು ಸಹಿತ ಗರ್ಭಿಣಿ ಸಾವು

ವಿಜಯಪುರ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಶಿಶು ಸಹಿತ ಗರ್ಭಿಣಿ ಮೃತಪಟ್ಟಿರುವ ಘಟನೆ ನಡೆದಿದೆ. ಭಾಗ್ಯಶ್ರೀ ರಾವುತಪ್ಪ ಪಾರಣ್ಣವರ (20) ಮೃತ ಗರ್ಭಿಣಿ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಮತ್ತು ಸಿಬ್ಬಂದಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದಕ್ಕೂ ಮೊದಲು, ಶುಕ್ರವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಭಾಗ್ಯಶ್ರೀ ಅವರನ್ನು ತಾಳಿಕೋಟೆ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾಗ್ಯಶ್ರೀ ಆರೋಗ್ಯದಲ್ಲಿ ಏರುಪೇರಾದ ಕಾರಣಕ್ಕೆ ಇಂದು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ ಮಾರ್ಗಮಧ್ಯೆ ಹೂವಿನ ಹಿಪ್ಪರಗಿ ಬಳಿ ನಿಂತಿದ್ದ ಟ್ರ್ಯಾಕ್ಟರ್​ಗೆ ಆಂಬ್ಯುಲೆನ್ಸ್​ ಡಿಕ್ಕಿಯಾದ ಪರಿಣಾಮ ತಾಯಿ ಮತ್ತು ಗರ್ಭದಲ್ಲಿನ ಶಿಶು ಕೊನೆಯುಸಿರೆಳೆದಿದ್ದಾರೆ.

ತಾಳಿಕೋಟೆ ಸಮುದಾಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಭಾಗ್ಯಶ್ರೀ ಸಾವಿಗೆ ಕಾರಣ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಮತ್ತು ದಲಿತ ಸಂಘಟನೆಯಿಂದ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹುಬ್ಬಳ್ಳಿ: ಕೆಲಸಕ್ಕೆ ಹೋಗೆಂದ ಪತ್ನಿ ಕೊಂದು, ಪತಿ ಆತ್ಮಹತ್ಯೆ

ABOUT THE AUTHOR

...view details