ಕರ್ನಾಟಕ

karnataka

ರೇಣುಕಾಚಾರ್ಯ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

By

Published : Dec 23, 2022, 4:15 PM IST

Updated : Dec 23, 2022, 7:59 PM IST

ಮಂದ್ರೂಪ ಪಟ್ಟಣದ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮೀಜಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

renukacharya-shivacharya-swamiji
ರೇಣುಕಾಚಾರ್ಯ ಶಿವಾಚಾರ್ಯ ಮಹಾ ಸ್ವಾಮೀಜಿ

ವಿಜಯಪುರ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ದಕ್ಷಿಣ ಸೋಲಾಪುರ ತಾಲೂಕಿನ ಮಂದ್ರೂಪ ಪಟ್ಟಣದ ರೇಣುಕಾಚಾರ್ಯ ಶಿವಾಚಾರ್ಯ ಮಹಾ ಸ್ವಾಮೀಜಿ (65) ಲಿಂಗೈಕ್ಯರಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಶ್ರೀಗಳು ಪೂಜೆಯಲ್ಲಿ ನಿರತರಾಗಿದ್ದಾಗ ಘಟನೆ ಸಂಭವಿಸಿದೆ. ಕೂಡಲೇ ಅವರನ್ನು ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಬೆಳಗ್ಗೆ 11ಕ್ಕೆ ಕೊನೆಯುಸಿರೆಳೆದಿದ್ದಾರೆ.

ಶನಿವಾರ ಮಧ್ಯಾಹ್ನ 3 ಗಂಟೆಗೆ ಮಂದ್ರೂಪದಲ್ಲಿರುವ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಚಡಚಣ ತಾಲೂಕಿನ ತದ್ದೇವಾಡಿ ಮಹಾಂತೇಶ ಹಿರೇಮಠ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಗಡಿ ವಿವಾದ: ಮಹಾರಾಷ್ಟ್ರ ಅಸೆಂಬ್ಲಿ ಎದುರು ಎಂವಿಎ ಪ್ರತಿಭಟನೆ

Last Updated : Dec 23, 2022, 7:59 PM IST

ABOUT THE AUTHOR

...view details