ಕರ್ನಾಟಕ

karnataka

ಡಿ.ಕೆ.ಶಿವಕುಮಾರ್ ಪದಗ್ರಹಣ ಹಿನ್ನೆಲೆ:  ಗುರುಮಠಕಲ್ ಕಾಂಗ್ರೆಸ್ ಕಚೇರಿಯಲ್ಲಿ ಸಭೆ

By

Published : Jun 29, 2020, 11:02 AM IST

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ಹಿನ್ನೆಲೆಯಲ್ಲಿ ಗುರುಮಠಕಲ್ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಯಿತು.

Gurumatkal congress meeting
ಡಿಕೆ ಶಿವಕುಮಾರ್ ಪದಗ್ರಹಣ

ಗುರುಮಠಕಲ್: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಪದಗ್ರಹಣ ಹಿನ್ನೆಲೆ ಪಕ್ಷದ ಕಾರ್ಯಕರ್ತರು ಪೂರ್ವಭಾವಿ ಸಭೆ ನಡೆಸಿದರು.

ಗುರುಮಠಕಲ್​​​​​​​​ನಲ್ಲಿ ಜುಲೈ 2 ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ನೂತನ ರಾಜ್ಯಾಧ್ಯಕ್ಷ ಡಿಕೆ. ಶಿವಕುಮಾರ್ ಪದಗ್ರಹಣ ಹಿನ್ನೆಲೆಯಲ್ಲಿ ಗುರುಮಠಕಲ್ ನಗರದ ರಾಜೀವ್ ಗಾಂಧಿ ಭವನದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಗುರಮಠಕಲ್ ಮತಕ್ಷೇತ್ರದ ಹಾಗೂ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರಿಗೆ ಪಕ್ಷ ಸಂಘಟನೆ ಒಂದೇ ನಮ್ಮ ಮೂಲ ಗುರಿಯಾಗಬೇಕು. ಪಕ್ಷವನ್ನು ಮತ್ತೆ ಬೂತ್ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಬೆಳಸುವ ಬದ್ಧತೆ ಎಲ್ಲರದ್ದಾಗಿರಬೇಕು. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲೇಬೇಕು ಎಂದು ಜಿಲ್ಲಾ ವೀಕ್ಷಕರಾಗಿ ಅಗಮಿಸಿದ ಚಂದ್ರಿಕಾ ಪರಮೇಶ್ವರಿ ಅವರು ಕರೆಕೊಟ್ಟರು.


ಈ ಸಂದರ್ಭದಲ್ಲಿ ಮುಖಂಡ ಕೃಷ್ಣಾ ಕುಲಕರ್ಣಿ ಮಾತನಾಡಿ, ಇದೇ ಜುಲೈ ೨ ರಂದು ಬೆಂಗಳೂರಿನಲ್ಲಿ ನಡೆಲಿರುವ ನಮ್ಮ ಪಕ್ಷದ ನೂತನ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ಕಾರ್ಯಕ್ರಮವನ್ನು ಡಿಜಿಟಲ್ ತಂತ್ರಾಜ್ಞಾನದ ಮೂಲಕ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಮುಟ್ಟುವಂತೆ ಗ್ರಾಮ ಪಂಚಾಯಿತಿ ಮಟ್ಟದ ಡಿಜಿಟಲ್ ಸಂಚಾಲಕರು ಕಾರ್ಯನಿರ್ವಹಿಸಬೇಕು ಎಂದರು.


ಗುರುಮಠಕಲ್ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಎಲ್ಲ ಘಟಕಗಳ ಅಧ್ಯಕ್ಷರು, ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು. ಗ್ರಾಮ ಪಂಚಾಯಿತಿ ಡಿಜಿಟಲ್ ಸಂಚಾಲಕರು ಹಾಜರಿದ್ದರು.

ABOUT THE AUTHOR

...view details