ಕರ್ನಾಟಕ

karnataka

ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ : ಕಲ್ಲು, ದೊಣ್ಣೆಗಳಲ್ಲಿ ಹೊಡೆದಾಡಿಕೊಂಡ ಗ್ರಾಮಸ್ಥರು

By

Published : Apr 15, 2022, 3:43 PM IST

Updated : Apr 15, 2022, 3:53 PM IST

ವೈರಲ್​ ಆದ ವಿಡಿಯೋ ಆಧರಿಸಿ 20 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗ್ರಾಮದಲ್ಲಿ ಶಾಂತಿ ಕದಡಿದ ಆರೋಪದ ಅಡಿಯಲ್ಲಿ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ತಾವೇ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ..

Yadagiri latest crime news
Yadagiri latest crime news

ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಗುರುಮಠಕಲ್ ತಾಲೂಕಿನ ಪುಟ್ ಪಾಸಕ್ ಗ್ರಾಮದಲ್ಲಿ ಜರುಗಿದೆ. ಮಕ್ಕಳು ಮಹಿಳೆಯರು ಎನ್ನದೆ ಕಲ್ಲು, ಬಡಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಲ್ಲು, ದೊಣ್ಣೆಗಳಲ್ಲಿ ಹೊಡೆದಾಡಿಕೊಂಡ ಗ್ರಾಮಸ್ಥರು

ಇದನ್ನೂ ಓದಿ: ಆಹೋರಾತ್ರಿ ಧರಣಿ ಮುಗಿಸುತ್ತಿದ್ದೇವೆ, ಸರ್ಕಾರದ ವಿರುದ್ಧದ ಹೋರಾಟ ನಿಲ್ಲಲ್ಲ: ಸಿದ್ದರಾಮಯ್ಯ

ಈ ಗಲಾಟೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಇಷ್ಟೊಂದು ದೊಡ್ಡ ಪ್ರಮಾಣದ ಗಲಾಟೆಯಾಗಿದ್ದರೂ ಗ್ರಾಮಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿಲ್ಲ. ವೈರಲ್​ ಆದ ವಿಡಿಯೋ ಆಧರಿಸಿ 20 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗ್ರಾಮದಲ್ಲಿ ಶಾಂತಿ ಕದಡಿದ ಆರೋಪದ ಅಡಿಯಲ್ಲಿ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ತಾವೇ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Last Updated : Apr 15, 2022, 3:53 PM IST

ABOUT THE AUTHOR

...view details