ಕರ್ನಾಟಕ

karnataka

ಸುರಪುರದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ, ಹಲವರಿಗೆ ಗಾಯ

By

Published : Jun 10, 2020, 12:51 PM IST

ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಹಲವರು ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಸುರಪುರ ನಗರದ ಒಡ್ಡರಗಲ್ಲಿಯಲ್ಲಿ ನಡೆದಿದೆ.

surpura latest crime news
ಎರಡು ಗುಂಪುಗಳ ಮಧ್ಯೆ ಗಲಾಟೆ

ಸುರಪುರ(ಯಾದಗಿರಿ):ಸುರಪುರ ನಗರದ ಒಡ್ಡರಗಲ್ಲಿಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡ ಎಲ್ಲರಿಗೂ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾಜಿ ನಗರಸಭೆ ಸದಸ್ಯೆ ಶಾರದ ನಾಗಪ್ಪ ಕಟ್ಟಿಮನಿ ಎಂಬುವವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಗುಂಪು ಘರ್ಷಣೆಯಲ್ಲಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೆಗೆ ಬಂದು ಗಲಾಟೆ ಮಾಡಿ ಕಲ್ಲು, ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಒಡ್ಡರ ಓಣಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸುರಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತ ದೂರು ದಾಖಲಾಗಿದೆ.

ABOUT THE AUTHOR

...view details