ಕರ್ನಾಟಕ

karnataka

ಮಾರಲಭಾವಿ ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣ: ಅಸ್ವಸ್ಥಗೊಂಡ 10ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು

By ETV Bharat Karnataka Team

Published : Aug 26, 2023, 2:21 PM IST

Updated : Aug 26, 2023, 3:15 PM IST

Vomiting, dysentery case: ಮಾರಲಭಾವಿ ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣದ ಹಿನ್ನೆಲೆ ಅಸ್ವಸ್ಥಗೊಂಡ 10ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಿಸಲಾಗಿದೆ.

Vomiting, dysentery case in Maralabhavi village: More than 10 people sick, admitted to hospital
ಮಾರಲಭಾವಿ ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣ: ಅಸ್ವಸ್ಥಗೊಂಡ 10ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು

ಕಲುಷಿತ ನೀರು ಸೇವನೆ ಪ್ರಕರಣ

ಯಾದಗಿರಿ:ಕಲುಷಿತ ನೀರು ಸೇವನೆಯಿಂದ 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಮಾರಲಭಾವಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಗ್ರಾಮದಲ್ಲಿ ವೃದ್ಧ ಸೇರಿದಂತೆ ಒಟ್ಟು 10 ಜನರಲ್ಲಿ ವಾಂತಿ, ಭೇದಿ ಕಾಸಿಕೊಂಡಿದೆ. ಸಚಿನ್ (14), ಮಂದಮ್ಮ (28), ನಂದಿನಿ (16), ಭಾಗ್ಯಶ್ರೀ (28), ಪ್ರಮೋಥಗೌಡ (8), ಪ್ರಥಮ ಕರಿಗೌಡ (5), ಅನಿರುತ್ ಅಡಗಲ್ (5), ಪ್ರತಿಭಾ ಮೇಟಿ (3) ವಿಠೋಭಾ ಸುಭೇದಾರ (70), ಹುಲಗಪ್ಪ ಕರಿಗೌಡ್ರ(55) ಅಸ್ವಸ್ಥಗೊಂಡಿದ್ದಾರೆ. ಇದರಲ್ಲಿ ನಾಲ್ವರು ಮಕ್ಕಳಿಗೆ ಹುಣಸಗಿ ಹಾಗೂ ತಾಳಿಕೋಟಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಗ್ರಾಮದಲ್ಲಿರುವ ಆರೋಗ್ಯ ಕ್ಯಾಂಪ್‌ಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಇವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ರಾಜಾ ವೆಂಕಟಪ್ಪ ನಾಯಕ ತಿಳಿಸಿದ್ದಾರೆ.

ಕಳೆದೆರಡು ದಿನಗಳ ಹಿಂದೆ ಇದೇ ಗ್ರಾಮದ ತಿಪ್ಪವ್ವ ಕುಚಬಾಳ (50) ಮೃತಪಟ್ಟಿದ್ದಳು. ವಾಂತಿ, ಭೇದಿಯಿಂದ ಬಳಲುತ್ತಿದ್ದಳು ಎನ್ನಲಾದ ಈಕೆಯನ್ನು ಕುಟುಂಬಸ್ಥರು ಹುಣಸಗಿ ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬಸ್ಥರು ಸಮೀಪದ ತಾಳಿಕೋಟಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಹೋಗುತ್ತಿರುವಾಗ ಮಾರ್ಗ ಮಧ್ಯದಲ್ಲಿ ತಿಪ್ಪವ್ವ ಮೃತಪಟ್ಟಿದ್ದರು. ಕಲುಷಿತ ನೀರು ಸೇವನೆ ಮಾಡಿರುವುದರಿಂದ ತಿಪ್ಪವ್ವ ಮೃತಪಟ್ಟಿದ್ದಾರೆ ಎಂದು ಸಹೋದರ ಮುದೆಪ್ಪ ಮೇಟಿ ಆರೋಪಿಸಿದರು.

''ಮಾರಲಭಾವಿ ಗ್ರಾಮದಲ್ಲಿ ಸದ್ಯ ಕಾಣಿಸಿಕೊಂಡಿರುವ ವಾಂತಿ, ಭೇದಿಗೆ ಯಾರು ಭಯಪಡುವ ಅಗತ್ಯವಿಲ್ಲ. ಗ್ರಾಮಸ್ಥರೆಲ್ಲರೂ ಒಂದು ಲೀಟರ್ ನೀರಿನಲ್ಲಿ ಆ್ಯಲೋಜಿನ್ ಮಾತ್ರೆಯನ್ನು ಹಾಕಿ ಕುಡಿಯಲು ತಿಳಿಸಲಾಗಿದೆ. ಇದರಿಂದ ಬ್ಯಾಕ್ಟೀರಿಯಾ, ವಾಂತಿ- ಭೇದಿ ನಿಯಂತ್ರಣಕ್ಕೆ ಬರುತ್ತದೆ'' ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ತಿಳಿಸಿದ್ದಾರೆ.

ಇತ್ತೀಚಿನ ಪ್ರಕರಣ, ವಾಂತಿ, ಭೇದಿಯಿಂದ 19 ಜನ ಅಸ್ವಸ್ಥ:ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣಗಳು ಕಂಡುಬರುತ್ತಿವೆ. ಇತ್ತೀಚೆಗೆ 19 ಜನರು ಅಸ್ವಸ್ಥಗೊಂಡಿದ್ದರು. ಗಾಜರಕೋಟ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ಎಂ.ಎಂ.ರಹಿಲ್ ಮಾತನಾಡಿ, "ಒಟ್ಟು 19 ಪ್ರಕರಣಗಳು ಕಂಡುಬಂದಿದ್ದವು. 8 ಜನರಲ್ಲಿ ಮಾತ್ರ ವಾಂತಿ, ಭೇದಿ ಸಮಸ್ಯೆ ಇದೆ. ಉಳಿದವರಿಗೆ ಹೊಟ್ಟೆ ನೋವು, ನೆಗಡಿ, ಜ್ವರ, ಕೆಮ್ಮು ಇದೆ. ಅವರು ಕೂಡಾ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದಾರೆ. ಕಲುಷಿತ ನೀರಿನಿಂದ ಆರೋಗ್ಯ ಸಮಸ್ಯೆಯಾಗಿದೆ'' ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ:ಬಿಜೆಪಿ‌ ಮುಖಂಡ ಮಣಿಕಂಠ ರಾಠೋಡ್​ ಮತ್ತೆ ಅರೆಸ್ಟ್, 14 ದಿನಗಳ ನ್ಯಾಯಾಂಗ ಬಂಧನ

Last Updated :Aug 26, 2023, 3:15 PM IST

ABOUT THE AUTHOR

...view details