ಕರ್ನಾಟಕ

karnataka

ಆಯುಷ್ಮಾನ್ ಭಾರತ ಕಾರ್ಡ್ ಮಿತಿ 5 ರಿಂದ 10 ಲಕ್ಷ ರೂ.ಗೆ ಹೆಚ್ಚಿಸಿದ ಗುಜರಾತ್ ಸರ್ಕಾರ

By

Published : Dec 23, 2022, 12:16 PM IST

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗುಜರಾತ್ ಸರ್ಕಾರ ಆರೋಗ್ಯಕ್ಕೆ ಸಂಬಂಧಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಆಯುಷ್ಮಾನ್ ಭಾರತ ಕಾರ್ಡ್ ಹೊಂದಿರುವವರಿಗೆ 10 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಿದೆ. (PMJAY ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಮಿತಿಯನ್ನು 5 ರಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ).

ಆಯುಷ್ಮಾನ್ ಭಾರತ ಕಾರ್ಡ್
pmjay

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆ 2022ರ ವೇಳೆ ಭಾರತೀಯ ಜನತಾ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಮಿತಿಯನ್ನು 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಿತ್ತು. ಈ ಹಿನ್ನೆಲೆ ಗುರುವಾರ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದು ಕೊಳ್ಳಲಾಗಿದೆ.

ರಾಜ್ಯದಲ್ಲಿ ಆಯುಷ್ಮಾನ್ ಭಾರತ ಕಾರ್ಡ್ ಹೊಂದಿರುವವರು 10,00,000 ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಸಚಿವ ಸಂಪುಟ ಸಭೆಯಲ್ಲಿ ಸಕಲ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಇದನ್ನೂ ಓದಿ:ಪತ್ರಕರ್ತರಿಗೆ ಆಯುಷ್ಮಾನ್ ಭಾರತ - ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ

ಆಯುಷ್ಮಾನ್ ಭಾರತ ಕಾರ್ಡ್ ಮಿತಿ ಹೆಚ್ಚಿಸಿರುವ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಹೃಷಿಕೇಶ್ ಪಟೇಲ್, ಚುನಾವಣೆಗೂ ಮುನ್ನ ಬಿಜೆಪಿ ಮಾಡಿದ ನಿರ್ಣಯವನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಭಾಗವಾಗಿ ( PMJAY) ಆಯುಷ್ಮಾನ್ ಭಾರತ್ ಕಾರ್ಡ್ ಮಿತಿಯನ್ನು 5 ಲಕ್ಷದಿಂದ 10 ಲಕ್ಷದವರೆಗೆ ಹೆಚ್ಚಳ ಮಾಡಲಾಗಿದೆ. ರಾಜ್ಯದ ಪ್ರತಿಯೊಬ್ಬ ನಾಗರಿಕರು ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.

ಇದನ್ನೂ ಓದಿ:ಕೊರೊನಾ ಎಫೆಕ್ಟ್​: ಆಯುಷ್ಮಾನ್​ ಭಾರತ ಕಾರ್ಡ್​ ವಿತರಣೆಗೆ ಬ್ರೇಕ್​​

ABOUT THE AUTHOR

...view details