ಕೊಯಮತ್ತೂರು: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಬ್ ಇನ್ಸ್ಪೆಕ್ಟರ್ವೊಬ್ಬರು ಹೋಟೆಲ್ನಲ್ಲಿ ದಾಂಧಲೆ ನಡೆಸಿರುವ ಘಟನೆ ನಡೆದಿದ್ದು, ಅದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿವೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಈ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದ್ದು, ಗ್ರಾಹಕರು ಹಾಗೂ ಸಿಬ್ಬಂದಿ ಮೇಲೆ ಎಸ್ಐ ಹಲ್ಲೆ ನಡೆಸಿದ್ದಾರೆ. ಕಳೆದ ವಾರ ಹೋಟೆಲ್ನಲ್ಲಿ ಊಟ ಮಾಡಿದ್ದ ಎಸ್ಐ ಹಣ ನೀಡದೇ ಹೋಗುತ್ತಿದ್ದಾಗ ಬಿಲ್ ಕಟ್ಟುವಂತೆ ಕೇಳಿದ್ದಾರೆ. ಆ ವೇಳೆ, ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ನಿನ್ನೆ ಅಲ್ಲಿಗೆ ತೆರಳಿ ಹಣ ನೀಡುವಂತೆ ಕೇಳಿ ದಾಂಧಲೆ ನಡೆಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಪ್ರಕರಣ ದಾಖಲು ಮಾಡಿದ್ದಾರೆ.
Last Updated :Apr 12, 2021, 5:55 PM IST