ಕರ್ನಾಟಕ

karnataka

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ: 6 ಚಿನ್ನದ ಪದಕ ಮುಡಿಗೇರಿಸಿಕೊಂಡ ವಿದ್ಯಾರ್ಥಿನಿ

By

Published : Jul 28, 2023, 6:04 PM IST

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ: 6 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಜ್ಯೋತಿ

ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಕಾರ್ಯಕ್ರಮ ಇಂದು ನೆರವೇರಿತು. ರಾಜ್ಯಪಾಲ ‌ಥಾವರ್ ಚಂದ್ ಗೆಹ್ಲೋಟ್‌ ಅವರು ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದು ಕೊಂಡವರು ನೌಕರಿಗಾಗಿ ಹುಡುಕಾಟ ನಡೆಸಬಾರದು. ತಾವುಗಳೇ ನೌಕರಿ ಸೃಷ್ಟಿಸುವ ಕೆಲಸ ಮಾಡಬೇಕು. ರಾಯಚೂರು ಕೃಷಿ ವಿವಿಯೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಕೃಷಿ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿ ಪಡಿಸುವಲ್ಲಿ ಗಮನ ಹರಿಸುತ್ತಿದೆ ಎಂದರು.

ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ ಹೊರ ಬಂದ ವಿದ್ಯಾರ್ಥಿಗಳ ಡಾಕ್ಟರೇಟ್, ಪದವಿಗಳು ಪ್ರಯೋಜನವಾಗುವುದಕ್ಕಾಗಿ ದೇಶದ ಅಭಿವೃದ್ಧಿ ಕೆಲಸ ಮಾಡಲು ಕೈಜೋಡಿಸಬೇಕು. ಜೊತೆಗೆ ನನಗೆ ವಿಶ್ವಾಸವಿದೆ, ನೀವೂ ಪಡೆದ ಶಿಕ್ಷಣ ದೇಶದ ಅಭಿವೃದ್ಧಿಗಾಗಿ ಬಳಕೆ ಆಗುತ್ತೆ ಎಂಬ ನಂಬಿಕೆಯಿದೆ ಎಂದು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭಕೋರಿದರು. ಬಳಿಕ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ವಿತರಣೆ ಮಾಡಿದರು. ಪದವಿಯಲ್ಲಿ ಗಂಗಾವತಿಯ ವಿದ್ಯಾರ್ಥಿನಿ ಜ್ಯೋತಿ 6 ಚಿನ್ನದ ಪದಕಗಳನ್ನು ಪಡೆದರು. ಘಟಿಕೋತ್ಸವದಲ್ಲಿ ಒಟ್ಟು 332 ಪದವಿ, 106 ಸ್ನಾತಕೋತ್ತರ ಹಾಗೂ 42 ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. 

ABOUT THE AUTHOR

...view details