ಕರ್ನಾಟಕ

karnataka

Leopard in Tumkur: ಒಂದೇ ಕಡೆ ಏಕಾಏಕಿ ಮೂರು ಚಿರತೆಗಳು ಪ್ರತ್ಯಕ್ಷ.. ಬೆಚ್ಚಿ ಬಿದ್ದ ತುಮಕೂರು ಮಂದಿ

By

Published : Jun 26, 2023, 1:17 PM IST

ಚಿರತೆಗಳು

ತುಮಕೂರು:ಏಕಾಏಕಿ ಮೂರು ಚಿರತೆಗಳು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿರೋ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ರಂಗನಕೆರೆ ಬಳಿಯ ರಂಗನಗುಡ್ಡದಲ್ಲಿ ನಡೆದಿದೆ. ಚಿರತೆಗಳು ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಸ್ಥಳೀಯರು, ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಜಾನುವಾರುಗಳನ್ನು ಮೇಯಿಸಲು ಹೋಗಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದಾರೆ.‌ ಈಗಾಗಲೇ ಈ ಮೂರು ಚಿರತೆಗಳು 5 ಜಾನುವಾರಗಳನ್ನು ಕೊಂದು ಹಾಕಿವೆ. ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. 

ತುಮಕೂರು ಜಿಲ್ಲೆಯಲ್ಲಿ ಅದರಲ್ಲೂ ಚಿಕ್ಕನಾಯಕನಹಳ್ಳಿ ತಾಲೂಕಿನ ಭಾಗದಲ್ಲಿ ಚಿರತೆಗಳ ಸಂಖ್ಯೆ ದುಪ್ಪಟ್ಟಾಗಿದ್ದು, ಕಳೆದ ಎರಡು ವರ್ಷಗಳಿಂದ ಚಿರತೆಗಳ ಹಾವಳಿಯಿಂದ ಜನರು ಬೇಸತ್ತು ಹೋಗಿದ್ದಾರೆ. ರಾತ್ರಿ ವೇಳೆ ದನದ ಕೊಟ್ಟಿಗೆಗಳಿಗೆ ನುಗ್ಗುವ ಚಿರತೆಗಳು ಜಾನುವಾರುಗಳು ಹಾಗೂ ಕುರಿ ಮೇಕೆಗಳನ್ನು ತಿಂದು ಹಾಕುತ್ತಿವೆ. 

ಚಿರತೆಗಳನ್ನು ಸೆರೆಹಿಡಿದು ಬೇರೆ ಕಡೆ ಸ್ಥಳಾಂತರಿಸುವಂತೆ ರೈತರು ಅನೇಕ ಬಾರಿ ಮನವಿ ಮಾಡಿಕೊಂಡರೂ ಅರಣ್ಯ ಇಲಾಖೆ  ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಮುಂದಾದರೂ ಚಿರತೆಗಳನ್ನು ಸೆರೆ ಹಿಡಿದು ದೂರದ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ರೈತರು ಮನವಿ ಮಾಡಿದ್ದಾರೆ. ಅಲ್ಲದೇ ಜಾನುವಾರುಗಳನ್ನು ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ - ಸಿಕ್ಕ ಸಿಕ್ಕ ವಸ್ತುಗಳು ಧ್ವಂಸ- ಗಜರಾಜನ ದಾಂಧಲೆ ನೋಡಿ

ABOUT THE AUTHOR

...view details