ಕರ್ನಾಟಕ

karnataka

Lorry overturns: ತಿರುವಿನಲ್ಲಿ ಕಂದಕಕ್ಕೆ ಉರುಳಿದ ಲಾರಿ; ಮಂಗಳೂರಿನಲ್ಲಿ ನಡೆದ ಘಟನೆಯ ಸಿಸಿಟಿವಿ ದೃಶ್ಯ

By

Published : Jul 28, 2023, 10:13 AM IST

ಕಂದಕಕ್ಕೆ ಉರುಳಿದ ಲಾರಿ

ಉಳ್ಳಾಲ (ಮಂಗಳೂರು):ಪ್ಲೈವುಡ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ನಾಟೆಕಲ್-ಮಂಜನಾಡಿ ಮಾರ್ಗಮಧ್ಯೆ ಸಂಭವಿಸಿದೆ. ಅಪಘಾತದಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಜುಲೈ 27ರ ಗುರುವಾರ ಘಟನೆ ನಡೆದಿದೆ. ಲಾರಿ ಪಲ್ಟಿಯಾಗುವ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ದೇರಳಕಟ್ಟೆಯಿಂದ ತೌಡುಗೋಳಿ ಕಡೆಗೆ ಲಾರಿ ತೆರಳುತ್ತಿತ್ತು. ರಸ್ತೆಯ ತಿರುವಿನಲ್ಲಿ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದೆ. ಲಾರಿ ಚಾಲಕ ಸಿಮೆಂಟ್ ಮಿಕ್ಸರ್ ಟ್ಯಾಂಕರ್‌ ಸಂಚರಿಸಲು ಅವಕಾಶ ಮಾಡಿಕೊಡಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ.

ಲಾರಿ ಚಾಲಕ ಬ್ರೇಕ್​ ಹಾಕಿದ ತಿರುವು ಸ್ವಲ್ಪ ತಗ್ಗು ಪ್ರದೇಶವಾಗಿದ್ದು ನಿಯಂತ್ರಣ ಕಳೆದುಕೊಂಡಿದೆ. ಲಾರಿಯ ಹಿಂದಿನಿಂದ ಬರುತ್ತಿದ್ದ ದ್ವಿಚಕ್ರ ವಾಹನ ಸ್ವಲ್ಪದರಲ್ಲೇ ಪಾರಾಗಿದೆ. ಕೃಷಿ ತೋಟಕ್ಕೆ ಲಾರಿ ಉರುಳಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕರಾವಳಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆ ಸದ್ಯ ಸ್ವಲ್ಪ ಕಡಿಮೆಯಾಗಿದೆ. ರಸ್ತೆಗಳಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಿದೆ. 

ಇದನ್ನೂ ಓದಿ:Watch... ಛತ್ತೀಸ್​ಗಢದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು, 9 ಬೋಗಿಗಳು ಚೆಲ್ಲಾಪಿಲ್ಲಿ

ABOUT THE AUTHOR

...view details